ವಿಷ ಪದಾರ್ಥ ಸೇವಿಸಿದ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು – ಪೇಸ್ ಬುಕ್ ನಲ್ಲಿ ಡೆತ್ ನೋಟ್ ಚರ್ಚೆ! – ಡೆತ್ ನೋಟ್ ನಲ್ಲಿ ಏನಿತ್ತು?

ವಿಷ ಪದಾರ್ಥ ಸೇವಿಸಿದ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು – ಪೇಸ್ ಬುಕ್ ನಲ್ಲಿ ಡೆತ್..

ಪುತ್ತೂರು: ಮೂರು ದಿನಗಳ ಹಿಂದೆ ಪುತ್ತೂರು ಲಾಡ್ಜ್ ವೊಂದರಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ವ್ಯಕ್ತಿ ಬರೆದಿಟ್ಟ ಡೆತ್ ನೋಟ್ ಅನ್ನು ಪೊಲೀಸರು ಮುಚ್ಚಿಹಾಕಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ

ಪೆರ್ನೆಯ ಜಯಂತ್ ಎಂಬವರು ಮೃತಪಟ್ಟವರಾಗಿದ್ದು ಅವರು ಪುತ್ತೂರು ಬಸ್ ನಿಲ್ದಾಣದ ಬಳಿಯ ಲಾಡ್ಜ್ ವೊಂದರಲ್ಲಿ ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ ಲಾಕ್ ಆಸ್ಪತ್ರೆ ಮತ್ತು ಅಲ್ಲಿಂದ ಕೆ ಎಮ್ ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಜಯಂತ್ ಅವರು ಮೃತಪಟ್ಟಿದ್ದಾರೆ. ಆದರೆ ಜಯಂತ್ ಅವರು ಡೆತ್ ನೋಟ್ ಬರೆದಿಟ್ಡಿದ್ದಾರೆ. ಡೆತ್ ನೋಟ್ ನಲ್ಲಿ ಏನಿದೆ. ಇದನ್ನು ಪೊಲೀಸರು ಮುಚ್ಚಿ ಹಾಕಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಈ ಕುರಿತು ಫೇಸ್ ಬುಕ್ ನಲ್ಲಿ ಕೇಸ್ ನಲ್ಲಿ ʼಪೊಲೀಸರ ಹೆಸರೇ ನಾಪತ್ತೆ. ಡೆತ್ ನೋಟ್ ನಲ್ಲಿ ಏನಿದೆ. ಶಾಸಕರೇ ಒಮ್ಮೆ ವಿಚಾರಿಸಿ ನೋಡಿʼ ಎಂಬ ಬರಹ ರವಾನೆಯಾಗುತ್ತಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?