ಮಂಗಳೂರಿನಲ್ಲಿ ಭೀಕರ ಅಪಘಾತ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಾಹಣಾಧಿಕಾರಿ ಮೃತ್ಯು.

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.

ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್‌ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಅ.18ರಂದು ಬೆಳಗ್ಗೆ ನಿಧನರಾಗಿದ್ದಾರೆ

News Editor

Learn More →

Leave a Reply

Your email address will not be published. Required fields are marked *