ಮಂಗಳೂರು : ನಂತೂರಿನಲ್ಲಿ ಮೀನಿನ ಕಂಟೇನರ್ ಸ್ಕೂಟಿಗೆ ಡಿಕ್ಕಿ: ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಯುವತಿ.

ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್‌ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ.

ರವಿವಾರ ಅಪರಾಹ್ನ 3.30 ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು  ಕೋಡಿಕಲ್ ನಿವಾಸಿಯಾಗಿರುವ ಕುಮಾರಿ ಕ್ರಿಸ್ತಿ ಕ್ರಾಸ್ತಾ ರವರು ನಂತೂರು ಜಂಕ್ಷನ್ ನಿಂದ ಪಂಪ್ ವೆಲ್ ಕಡೆಗೆ ಹೋಗುತ್ತಿರುವ ವೇಳೆ ನಂತೂರು ಜಂಕ್ಷನ್ ಬಳಿ ಶಾಂತಿ ಕಿರಣ ಬಿಲ್ಡಿಂಗಿನ ಎದುರು ಕೆ ಎಲ್ 11 ಬಿವಿ 4718 ನಂಬರಿನ ಹಸಿ ಮೀನು ಸಾಗಿಸುವ ಕಂಟೇನರ್ ವಾಹನವನ್ನು ಕ್ರಿಸ್ತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಈ ಸಂದರ್ಭ ಯುವತಿ ಕಂಟೇನರ್ ವಾಹನದ  ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡು ಸ್ಥಳದಲ್ಲೇ  ಸಾವನ್ನಪ್ಪದ್ದಾರೆ. ಕಂಟೇನರ್ ವಾಹನ ಚಾಲಕನ ಅಜಾಗೃತೆಯ ಚಾಲನೆಯೇ ಘಟನೆ ಕಾರಣವೆಂದು ಹೇಳಲಾಗಿದೆ. ಈ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಮೊ. ಸಂಖ್ಯೆ 152/24 ಕಲ0 281, 106(1) ಬಿಎನ್ ಎಸ್ ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?