ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಕಾರ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ.

ತಮ್ಮ ವಿರುದ್ಧ ಉಡುಪಿ ಜಿಲ್ಲೆಯ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು ಹಾಗೂ ಎಫ್‌ಐಆರ್ ರದ್ದು ಕೋರಿ ಶಿಲ್ಪಿ ಕೃಷ್ಣ ನಾಯ್ ಅರ್ಜಿಯನ್ನು ವಿಚಾರಣೆ ನಡೆಸಿದ ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.
ಮೇಲ್ನೋಟಕ್ಕೆ ಅಕ್ರಮ ಆಗಿರುವ ಬಗ್ಗೆ ಸಾಬೀತು ಆಗಿದೆ. ಪ್ರಕರಣ ಬಗ್ಗೆ ತನಿಖೆ ನಡೆಯಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ ಅರ್ಜಿದಾರರ ವಿರುದ್ಧ ಆಧಾರ ರಹಿತ ಆರೋಪ ಮಾಡಲಾಗಿದೆ. ಪ್ರಸ್ತುತ ಪರಶುರಾಮ ಥೀಮ್ ಪಾರ್ಕ್ ನಲ್ಲಿರುವ ಮೂರ್ತಿಯನ್ನು ಬೇರೆಡೆ ಕೊಂಡೈಯಲಾಗಿದೆ. ಅರ್ಜಿದಾರರ ಬೆಂಗಳೂರಿನ ನಿವಾಸಕ್ಕೆ ತೆರಳಿ ಕಾಂಗ್ರೆಸ್ ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ. ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಹಾಗಾಗಿ ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಆದರೆ ವಾದ ತಿರಸ್ಕರಿಸಿರುವ ಹೈಕೋರ್ಟ್ ಆರೋಪಿ ಕೃಷ್ಣ ನಾಯ್ಡ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ.

ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಏಕ ಸದಸ್ಯ ಪೀಠ ತಿರಸ್ಕಾರ ಮಾಡಿ ಆದೇಶ ಹೊರಡಿಸಿದೆ.
ಕೃಷ್ಣ ಶೆಟ್ಟಿ ಯವರ ಪರವಾಗಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಬೆಂಗಳೂರಿನ ವಿ ಕೆ ಶ್ರೀಕಾಂತ್ ರವರು ವಾದ ವನ್ನು ಮಂಡಿಸಿರುತ್ತಾರೆ.ಆರೋಪಿ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ರವರು, ನಿರ್ಮಿತಿ ಕೇಂದ್ರದ ಪರ ದಿನೇಶ್ ಹೆಗ್ಡೆ ಉಳಿಪಾಡಿ ಹಾಗೂ ಸರಕಾರದ ಪರವಾಗಿ ಬಿ ಏನ್ ಜಗದೀಶರವರು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿರುತ್ತಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?