ಫರಂಗಿಪೇಟೆ ತಲವಾರು ದಾಳಿ; ಇಬ್ಬರಿಗೆ ಗಾಯ.

ಬಂಟ್ವಾಳ: ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಬುಧವಾರ ನಡೆದಿದೆ.

ಅಮ್ಮೆಮಾರ್ ನಿವಾಸಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಸ್ಲೀಮ್ ಮತ್ತು ಮಹಮ್ಮದ್ ಶಾಕೀರ್ ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಹಾಕಿದ್ದಾನೆ.

ಈ ವೇಳೆ ತಸ್ಲೀಮ್ ಮತ್ತು ಮಹಮ್ಮದ್ ಶಾಕೀರ್ ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ ಆರೋಪಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

News Editor

Learn More →

Leave a Reply

Your email address will not be published. Required fields are marked *