5 ಕೋಟಿ ನೀಡುವಂತೆ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳುಹಿಸಿದ ತರಕಾರಿ ಮಾರಾಟಗಾರ ಅರೆಸ್ಟ್‌

5 ಕೋಟಿ ನೀಡುವಂತೆ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳುಹಿಸಿದ ತರಕಾರಿ ಮಾರಾಟಗಾರ ಅರೆಸ್ಟ್‌

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಇತ್ತೀಚಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ (Lawrence Bishnoi) ಜೀವ ಬೆದರಿಕೆ ಸಂದೇಶ ಕಳುಹಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು (Mumbai Police) ಜೆಮ್‌ಶೆಡ್‌ಪುರದ ತರಕಾರಿ ಮಾರಾಟಗಾರನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಶೇಖ್ ಹುಸೇನ್ ಶೇಖ್ ಮೌಸಿನ್ (24) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಬಾಬಾ ಸಿದ್ದಿಕಿ (Baba Siddique) ಹತ್ಯೆಯ ಬಳಿಕ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯ ಸಂದೇಶ ಬಂದಿತ್ತು. ಬೆದರಿಕೆಯ ಕುರಿತು ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರಿಗೆ ವಾಟ್ಸಪ್ ಸಂದೇಶ ಬಂದಿತ್ತು

ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸಲ್ಮಾನ್ ಖಾನ್ ಅವರೊಂದಿಗಿನ ಎಲ್ಲಾ ದ್ವೇಷಗಳನ್ನು ಕೊನೆಗೊಳಿಸಲು ಈ 5 ಕೋಟಿ ರೂ.ಯ ಬೇಡಿಕೆಯನ್ನು ಇಟ್ಟಿತ್ತು. ಈ ಸಂದೇಶಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದು, ಜೆಮ್‌ಶೆಡ್‌ಪುರ್‌ನ ತರಕಾರಿ ಮಾರಾಟಗಾರನೊಬ್ಬನನ್ನು ಬಂಧಿಸಿದ್ದಾರೆ.

ಮಂಗಳವಾರ ಬೆದರಿಕೆ ಬಂದಿದ್ದ ಸಂಖ್ಯೆಯಂದಲೇ ಪುನಃ ಸಂದೇಶ ಬಂದಿದ್ದು, ಅದರಲ್ಲಿ ಬೆದರಿಕೆ ಸಂದೇಶವನ್ನು ತಪ್ಪಾಗಿ ಕಳುಹಿಸಲಾಗಿದೆ. ಬಳಿಕ ಕ್ಷಮೆಯಾಚಿಸಿದ ಸಂದೇಶವನ್ನು ಕಳುಹಿಸಿದ್ದಾರೆ. ಪೊಲೀಸರು ಮೊಬೈಲ್ ನಂಬರ್‌ನ್ನು ಟ್ರ್ಯಾಕ್‌ ಮಾಡಿದಾಗ ಜಾರ್ಖಂಡ್‌ನಲ್ಲಿ ಪತ್ತೆಯಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ನಟ ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಹಾಗೂ ಲಾರೆನ್ಸ್ ಬಿಷ್ಣೋಯಿ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ 5 ಕೋಟಿ ರೂ. ಹಣವನ್ನು ಕೋಡಿ ಎಂದು ಬೇಡಿಕೆಯಿಟ್ಟಿದ್ದರು. ಇದನ್ನು ಸಾಮಾನ್ಯವಾಗಿ ತೆಗೆದುಕೊಳ್ಳಬೇಡಿ. ಒಂದು ವೇಳೆ ತೆಗೆದುಕೊಂಡು ಹಣಕೊಡದೇ ಇದ್ದರೆ ಬಾಬಾ ಸಿದ್ದಿಕಿಗಿಂತ ಸಲ್ಮಾನ್ ಖಾನ್ ಹತ್ಯೆ ಹೀನಾಯವಾಗಿರುತ್ತದೆ ಎಂದು ಬರೆಯಲಾಗಿತ್ತು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?