ಮಂಗಳೂರು : ಅಸ್ತ್ರ ಸಂಸ್ಥೆಯ ವತಿಯಿಂದ 5ನೇ ವರ್ಷದ ಅಂಗವಾಗಿ ಸೌಹಾರ್ದಯುತ ಮದುವೆ, ಆಂಬುಲೆನ್ಸ್ ಕೊಡುಗೆ…!

ಮಂಗಳೂರು : “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈ ದಿನಗಳಲ್ಲಿ ಸಮಾಜಕ್ಕಾಗಿ ವಿಶೇಷ ಕೆಲಸವನ್ನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ, ಇದರ ಜೊತೆಗೆ ಟ್ರಸ್ಟ್ ಹೆಸರಿನಲ್ಲಿ ನ.14ರಂದು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದೇವೆ“ ಎಂದು ಸಂಸ್ಥೆಯ ಸಿಇಒ ಲಂಚುಲಾಲ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

”ಇದೇ ಸಂದರ್ಭದಲ್ಲಿ ಸೌಹಾರ್ದಯುತವಾಗಿ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದ ಮೂರು ಬಡ ಕುಟುಂಬದ ಜೊಡಿಗೆ ಸಾಮೂಹಿಕ ಮದುವೆಯನ್ನು ಮಾಡಲು ನಿರ್ಧರಿಸಲಾಗಿದೆ. ಕಡುಬಡವರ ಮದುವೆಯ ಸಂಪೂರ್ಣ ಖರ್ಚು ಜೊತೆಗೆ ಜೀವನ ನಿರ್ವಹಣೆಗೆ 50000 ರೂ. ಕೊಡಲಾಗುವುದು, ಹಿಂದೂ ಜೋಡಿ ಮುಂದೆ ಬಂದಿದ್ದು ಮುಸ್ಲಿಂ, ಕ್ರೈಸ್ತ ಜೋಡಿ ಅವರಾಗಿಯೇ ಮುಂದೆ ಬಂದಲ್ಲಿ ಖುಷಿಯ ವಿಚಾರ. ಬಡವರ ಹಿತಕ್ಕಾಗಿ ಸಮಾಜ ಸೇವೆಗಾಗಿ ಮಹತ್ತರ ಕಾರ್ಯದಲ್ಲಿ ನಮ್ಮ ಸಂಸ್ಥೆಯು ತೊಡಗಿಕೊಂಡಿದ್ದು ಇದಕ್ಕೆ ಜನರು ಸಹಕಾರ ನೀಡಬೇಕು“ ಎಂದರು. ಪತ್ರಿಕಾಗೋಷ್ಟಿಯಲ್ಲಿ ಪ್ರಕಾಶ್ ಶೆಟ್ಟಿ ಧರ್ಮನಗರ, ಯತೀಶ್ ಪೂಜಾರಿ, ಚರಣ್ ರಾಜ್ ಬಂದ್ಯೋಡು ಮತ್ತಿತರರು ಉಪಸ್ಥಿತರಿದ್ದರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?