ಉಳ್ಳಾಲ: ಜಾಮೀನಿನ ಮೇಲೆ ಬಂದಿದ್ದ ಅಸಿಫ್ ಮೇಲೆ ದುಷ್ಕರ್ಮಿಗಳಿಂದ ತಲವಾರು ದಾಳಿ ಯತ್ನ.

ಉಳ್ಳಾಲ: ಪೊಲೀಸ್ ಠಾಣೆಯಲ್ಲಿ ಸಂಘಪರಿವಾರದ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆ.ಸಿ.ರೋಡ್- ಉಚ್ಚಿಲದ ಪೆಟ್ರೋಲ್ ಬಂಕ್ ಎಂಬಲ್ಲಿ ನಡೆದಿದ್ದು, ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲಿ ಠಾಣಾಧಿಕಾರಿಯ ಎದುರೇ ಹಿಂದೂ ಮುಖಂಡನಿಗೆ ಹಲ್ಲೆ ನಡೆಸಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿ ಆಸೀಫ್ ಮೇಲೆ ಹಲ್ಲೆ ಗೆ ಯತ್ನಿಸಲಾಗಿದೆ
ಎಂಟು ಮಂದಿ ಹೆಲ್ಮಟ್ ಧರಿಸಿ ದ್ವಿಚಕ್ರ ವಾಹನದಲ್ಲಿ ಆಸಿಫ್ ಪ್ರಯಾಣಿಸುತ್ತಿದ್ದ ಕಾರನ್ನು ನವೆಂಬರ್ 7 ರಂದು ರಾತ್ರಿ 9.30ರ ಸುಮಾರಿಗೆ ಹಿಂಬಾಲಿಸಿದ್ದರು. ಉಚ್ಚಿಲದ ಪೆಟ್ರೋಲ್ ಬಂಕ್ ಸಮೀಪ ಕಾರನ್ನು ಅಡ್ಡಗಟ್ಟಿದ್ದರು. ಎಲ್ಲರ ಕೈಯಲ್ಲೂ ಮೊಟ್ಟೆ ಹಾಗು ತಲವಾರುಗಳಿದ್ದವು. ದುಷ್ಕರ್ಮಿಗಳು ಬೀಸಿದ ತಲವಾರು ಆಸೀಫ್ ಇದ್ದ ಕಾರಿಗೆ ತಗುಲಿದ್ದು, ಗಾಜಿಗೆ ಹಾನಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ
‘ಬೈಕುಗಳಲ್ಲಿದ್ದ ಆಗಂತುಕರು ಹಿಂಬಾಲಿಸುತ್ತಿರುವುದು ಗೊತ್ತಾದ ಬಳಿಕ ಆಸೀಫ್ ಇದ್ದ ಕಾರಿನ ಚಾಲಕ ವೇಗವಾಗಿ ವಾಹನ ಚಲಾಯಸಿದ್ದ. ತಲಪಾಡಿ ಟೋಲ್‌ಗೇಟ್ ಬಳಿ ಬ್ಯಾರಿಕೇಡ್‌ಗೆ ಕಾರು ಗುದ್ದಿದೆ. ಬಳಿಕ ಮಂಜೇಶ್ವರ ಠಾಣೆಗೆ ತೆರಳಿ ಅವರು ರಕ್ಷಣೆ ಕೋರಿದ್ದರು’ ಎಂದೂ ಮೂಲಗಳು ತಿಳಿಸಿವೆ

News Editor

Learn More →

Leave a Reply

Your email address will not be published. Required fields are marked *