ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವುದು ಖಂಡನೀಯ.ಆರೋಪಿಗೆ ಸೂಕ್ತ ಶಿಕ್ಷೆ ನೀಡಬೇಕು: ಕಿಶೋರ್ ಕುಮಾರ್ ಪುತ್ತೂರು.

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವುದು ಖಂಡನೀಯ.ಆರೋಪಿಗೆ ಸೂಕ್ತ ಶಿಕ್ಷೆ ನೀಡಬೇಕು: ಕಿಶೋರ್ ಕುಮಾರ್ ಪುತ್ತೂರು.

ಪುತ್ತೂರು: ತುಳುನಾಡಿನಲ್ಲಿ ನಾಗದೇವರಿಗೆ ವಿಶೇಷ ಪ್ರಾಧಾನ್ಯತೆ ಇದೆ. ಅದೂ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಯನ್ನು ಧ್ವಂಸಗೊಳಿಸುವುದಲ್ಲದೆ ಕೆಟ್ಟ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಹೇಳಿದ್ದಾರೆ.

ಅವರು ಖಾಸಗಿ ವ್ಯಕ್ತಿಯಿಂದ ಹಾನಿಗೊಳಗಾದ ನಗರದ ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಶುಕ್ರವಾರ ಭೇಟಿ ನೀಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈಗಾಗಲೇ ಪುತ್ತೂರು ನಗರ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದು, ಇದಕ್ಕಾಗಿ ಅಭಿನಂದನೆ ಸಲ್ಲಿಸಿದ ಅವರು, ಹಿಂದೂಗಳ ಶ್ರದ್ಧಾ ಕೇಂದ್ರಗಳಿಗೆ ಅನ್ಯಾಯ ಆದಾಗ ಯಾವುದೇ ಕಾರಣಕ್ಕೂ ಬಿಡಬಾರದು. ಆತನಿಗೆ ತಲೆಕೆಟ್ಟಿದೆ ಎಂದಾದರೆ ಆತ ಹಿಂದೂ ದೇವಸ್ಥಾನ, ದೈವಸ್ಥಾನಗಳಿಗೆ ಯಾಕೆ ಹಾನಿ ಮಾಡಬೇಕು ಎಂದು ಪ್ರಶ್ನಿಸಿದರು.

ತಲೆ ಕೆಟ್ಟಿದೆ ಎನ್ನುವುದಕ್ಕೆ ವೈದ್ಯರು ಸರಿಯಾಗಿ ಟ್ರೀಟ್‍ ಮೆಂಟ್ ಮಾಡಬೇಕು. ಇಂತಹಾ ಘಟನೆಗಳು ಮತ್ತೆ ಮತ್ತೆ ಮರುಕಳಿಸಬಾರದು. ಈ ರೀತಿಯಾದಾಗ ಹಿಂದೂ ಸಮಾಜ ಸಹಿಸುವುದಿಲ್ಲ. ಈ ಕುರಿತು ನಾವು ಎಚ್ಚೆತ್ತುಕೊಳ್ಳಬೇಕು. ಪೊಲೀಸರು ಸರಿಯಾದ ತನಿಖೆ ನಡೆಸಿ ಆರೋಪಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಪ್ರಧಾನ ಕಾರ್ಯದರ್ಶಿ ನಾಗೇಶ್‍ ಪ್ರಭು,ಶಶಿಧರ್ ನಾಯಕ್, ನಾಗೇಂದ್ರ ಬಾಳಿಗ, ಪ್ರವೀಣ್,ಧನ್ಯ ಕುಮಾರ್‍, ಜಯಂತ ಕುಂಜೂರು ಪಂಜಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?