ಬೆಂಗಳೂರು : ವಾಲ್ಮೀಕಿ ಆಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರು ಸಿಎಂ ನಿವಾಸಕ್ಕೆ ತೆರಳಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. ಅಲ್ಲದೆ, ಪ್ರತಿಪಕ್ಷದ...
Read More
ಉಡುಪಿ: ಹೃದಯಾಘಾತವಾಗಿದ್ದ ಶಾಲಾ ಬಸ್ ಚಾಲಕ ಸಾವು.
ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಮೃತಪಟ್ಟವರು. ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ...
Read More
ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ ಎಂದು...
Read More
ನೆಲ್ಯಾಡಿ: ಬೈಕ್ – ಕಾರು ನಡುವೆ ಅಪಘಾತ; ಸವಾರ ಸ್ಥಳದಲ್ಲಿಯೇ ಸಾವು.
ಬೈಕ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ...
Read More
ಕುಂಪಲ: ಪಟಾಕಿ ಸಿಡಿಸಿದ ವಿಚಾರ… ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ.
ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಸಂಘವೊಂದರಲ್ಲಿ...
Read More
NDA ಸಭೆ’ಯಲ್ಲಿ ಮೈತ್ರಿ ಪಕ್ಷದ ನಾಯಕರಾಗಿ ‘ಮೋದಿ’ ಹೆಸರು ಅನುಮೋದನೆ
ನವದೆಹಲಿ : ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಎಲ್ಲಾ ಸದಸ್ಯರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈತ್ರಿ ನಾಯಕರಾಗಿ ತಮ್ಮ ಬೆಂಬಲವನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲು ಲೋಕಸಭಾ ಚುನಾವಣಾ ಫಲಿತಾಂಶದ ಒಂದು ದಿನದ...
Read More
ಬಿಜೆಪಿಗೆ ಮತ್ತೊಂದು ಗುಡ್‌ನ್ಯೂಸ್ ನೀಡಿದ ಆ 10 ಜನ ಯಾರು?
ನೂತನ ಸರ್ಕಾರ ರಚನೆ ಹಂತದಲ್ಲಿರುವ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೊಂದು ಶುಭಸುದ್ಧಿ ಸಿಕ್ಕಿದ್ದು, ಸ್ವತಂತ್ರವಾಗಿ ಗೆದ್ದ 10 ಅಭ್ಯರ್ಥಿಗಳು ಬಿಜೆಪಿಗೆ ಬೇಷರತ್ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸ್ವತಂತ್ರವಾಗಿ ಗೆದ್ದ 10 ಅಭ್ಯರ್ಥಿಗಳ ಜೊತೆಯಲ್ಲಿ ಸ್ವತಃ ಅಮಿತ್ ಶಾ ಚರ್ಚೆ ನಡೆಸಿದ್ದು, 10 ಮಂದಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.ಆದರೆ...
Read More
ಬಂಟ್ವಾಳ : ಅಕ್ರಮ ಮರಳು ಸಾಗಾಟದ ಎರಡು ಟಿಪ್ಪರ್ ಪೊಲೀಸ್ ವಶ : ಚಾಲಕರು ಪರಾರಿ.
ಬಂಟ್ವಾಳ : ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಪೊಲೀಸರು ಸೂಚನೆ ನೀಡಿದಾಗ ಲಾರಿ ನಿಲ್ಲಿಸಿ ಚಾಲಕರಿಬ್ಬರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ದಿನಾಂಕ: 04.06.2024 ರಂದು ಬೆಳಿಗ್ಗಿನ ಜಾವ ಪಾಣೆಮಂಗಳೂರಿನಲ್ಲಿ,...
Read More
ಜೂನ್ 8ರಂದು ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ.
ನವದೆಹಲಿ: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಪ್ರಕಟವಾದ ಒಂದು ದಿನದ ನಂತರ, ಜೂನ್ 8 ರಂದು ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಎನ್ಡಿಎ ಸರ್ಕಾರ ರಚನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ...
Read More
ರೈ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ.
ಸಮಾಜ ಸೇವೆಯೇ ಟ್ರಸ್ಟ್ ನ ಪ್ರಮುಖ ಧ್ಯೇಯ: ಸುದೇಶ್ ಶೆಟ್ಟಿಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ...
Read More

