ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನ : ಆರೋಪಿಯ ಬಂಧನ.

ಮಂಗಳೂರು: ನಗರದ  ಜಿಲ್ಲಾ ಕಾರಾಗೃಹದೊಳಗೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ 21 ವರ್ಷದ ಯುವಕನನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ತಿಳಿಯಲಾಗಿದೆ.

ಅಪರಾಹ್ನ 3ಕ್ಕೆ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿ ಅಲ್ಲಿಂದ ಕಾರಾಗೃಹದ ಒಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಯತ್ನಿಸುತ್ತಿದ್ದ. ಇದನ್ನು ಗಮನಿಸಿದ ಗಸ್ತುನಿರತ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪರಿಶೀಲನೆ ನಡೆಸಿದಾಗ, ಬಂಡಲ್‌ಗಳಲ್ಲಿ ಎರಡು ಕೀಪ್ಯಾಡ್ ಮೊಬೈಲ್ ಫೋನ್‌ಗಳು ಮತ್ತು ಎರಡು ಸಿಗರೇಟ್ ಪ್ಯಾಕೆಟ್‌ಗಳು ಇರುವುದು ಕಂಡುಬಂದಿದೆ. ಪ್ರಜ್ವಲ್ ಈ ಹಿಂದೆ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ವಿಚಾರ ಬಹಿರಂಗವಾಗಿದೆ. 

ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *