ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡೇಟು

ಉಳ್ಳಾಲ: ರಾಜ್ಯದಲ್ಲಿ ಸದ್ದು ಮಾಡಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ (ಜ.21) ನಡೆದಿದೆ. ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ.

ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ ಕಣ್ಣನ್‌ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್‌ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್‌ ಮಣಿ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.

News Editor

Learn More →

Leave a Reply

Your email address will not be published. Required fields are marked *