ಉಳ್ಳಾಲ| ಕೋಟೆಕಾರಿನಲ್ಲಿ ಮತ್ತೊಂದು ಶೂಟೌಟ್: ದರೋಡೆ ಆರೋಪಿ ಕಾಲಿಗೆ ಗುಂಡೇಟು.

ಉಳ್ಳಾಲ: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ಮತ್ತು ಯೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಲಾಗಿತ್ತು. ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಫೆ.3ರ ವರೆಗೆ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದರು.
ಫೆ. 1 ರಂದು ಶನಿವಾರ ಮಧ್ಯಾಹ್ನ ಸ್ಥಳ ಮಹಜರು ಉದ್ದೇಶಕ್ಕಾಗಿ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ಗಾಯಾಳು ಆರೋಪಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್‌ ಎಂಬವರಿಗೆ ಗಾಯವಾಗಿದೆ. ಮಂಜುನಾಥ್ ಮೇಲೆ ಹಲ್ಲೆ ನಡೆಸಿ ಮುರುಗನ್ ಪರಾರಿಯಾಗಲು ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ನಾಲ್ಕೆ ದಿನದಲ್ಲಿ ಕಣ್ಣನ್ ಮಣಿಯನ್ನು ಬಂಧಿಸಿ, ಸ್ಥಳ ಮಹಜರು ಕರೆದೊಯ್ದಿದ್ದಾಗಲೂ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದರು. ಇದೀಗ ಎರಡನೇ ಬಾರಿಗೆ ಗುಂಡು ಹಾರಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *