ಅಕ್ರಮ ಮರಳು ಸಾಗಾಟ : 2 ಟಿಪ್ಪರ್‌ ವಶಕ್ಕೆ : ಚಾಲಕ ಪರಾರಿ.

ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚಾಲಕರು ಪರಾರಿಯಾಗಿದ್ದಾರೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಎಸ್. ಆರ್. ಅವರು ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಪುಲ್ಕೇರಿ ಬೈಪಾಸ್ ಕಡೆಯಿಂದ 2 ಟಿಪ್ಪರ ಲಾರಿಗಳು ಬರುತ್ತಿದ್ದು ನಿಲ್ಲಿಸುವಂತೆ ಸೂಚನೆ ನೀಡಿದಾಗ ಸ್ವಲ್ಪ ದೂರದಲ್ಲಿಯೇ ನಿಲ್ಲಿಸಿ ಅದರ ಚಾಲಕರು ಟಿಪ್ಪರ್‌ ಲಾರಿಯಿಂದ ಇಳಿದು ಓಡಿ ಹೋಗಿದ್ದಾರೆ. 

ಟಿಪ್ಪರ್‌ ಲಾರಿಗಳನ್ನು ಪರಿಶೀಲಿಸಲಾಗಿ ಎಲ್ಲಿಯೋ ಸರಕಾರಿ ಸ್ಥಳದಿಂದ ಮರಳನ್ನು ಕಳವು ಮಾಡಿ KA-19-AD-0602 ಹಾಗೂ KA-19-D-5716ನೇ ನಂಬ್ರದ ಟಿಪ್ಪರ ಲಾರಿಗಳಲ್ಲಿ ತಲಾ 3 ಯೂನಿಟ್‌ ಮರಳನ್ನು ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದಾಗಿ ತಿಳಿದು ಬಂದಿರುತ್ತದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *