ಹಿಂದೂ ಫೈರ್ ಬ್ರಾಂಡ್ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ.

ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದ್ದು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು ಈ ನಿರ್ಧಾರ ಕೈಗೊಂಡಿದೆ.

News Editor

Learn More →

Leave a Reply

Your email address will not be published. Required fields are marked *