ರಿಕ್ಷಾ ಚಾಲಕ ಸೇರಿ ಮೂವರಿಂದಪ.ಬಂಗಾಳ ಮೂಲದ ಯುವತಿ ಸಾಮೂಹಿಕ ಅತ್ಯಾಚಾರ.

ಉಳ್ಳಾಲ: ಗೆಳೆಯನೊಂದಿಗೆ ಜಗಳ ನಡೆಸಿ, ರಿಕ್ಷಾ ಚಾಲಕನೊಂದಿಗೆ ಗೆಳೆತನ ನಡೆಸಿದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪ ಎ.17 ರ ತಡರಾತ್ರಿ 1.30 ಸುಮಾರಿಗೆ ನಡೆದಿದೆ. ಪ್ರಕರಣ ಸಂಬAಧ ಮಂಗಳೂರು, ಮುಲ್ಕಿ ಹಾಗೂ ಕುಂಪಲ ನಿವಾಸಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮುಲ್ಕಿ ನಿವಾಸಿ 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪ್ರಭುರಾಜ್ (38),. ಇಲೆಕ್ಟಿçÃಷಿಯನ್ ಕಾರ್ಯನಿರ್ವಹಿಸುವ ಕುಂಪಲ ಮೂಲದ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮಣಿ(30) ಬಂಧಿತರು.
ಪಶ್ಚಿಮ ಬಂಗಾಳದ ಕುಚ್ ಬಿಹಾರ್ ಮೂಲದ 20 ಹರೆಯದ ಯುವತಿ 2-3 ವರ್ಷಗಳಿಂದ ಕೇರಳದ ಫ್ಲೆöÊವುಡ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳೂರಿನಲ್ಲಿ ಬೇರೆ ಸಂಸ್ಥೆಯಲ್ಲಿ ಕೆಲಸದ ಅವಕಾಶವಿದ್ದ ಕಾರಣ ಗೆಳೆಯನ ಜೊತೆೆ ಎ.16 ರಂದು ಬೆಳಿಗ್ಗೆ ಮಂಗಳೂರಿಗೆ ಬಂದಿದ್ದಳು. ಈ ವೇಳೆ ಗೆಳೆಯನ ಜೊತೆಗೆ ಜಗಳವಾಗಿ ಆತ ಈಕೆಯ ಮೊಬೈಲಿಗೆ ಹಾನಿ ಮಾಡಿದ್ದ. ಹಾಗಾಗಿ ಮೊಬೈಲ್ ರಿಪೇರಿಗೆಂದು ಆಟೋ ಹಿಡಿದು ಮೊಬೈಲ್ ಅಂಗಡಿಗೆ ತೆರಳಿದ್ದಾಳೆ. 5-6 ಗಂಟೆಗಳ ಕಾಲ ಆಕೆ ಆಟೋ ಡ್ರೆöÊವರ್ ಜೊತೆಗೇ ಇದ್ದು, ಅವನ ಜೊತೆಗೆ ಗೆಳೆತನ ಆಗಿದೆ. ಮೊಬೈಲ್ ರಿಪೇರಿ ಹಣ ಕೂಡಾ ಆತನೇ ಪಾವತಿಸಿದ್ದ. ಆ ಬಳಿಕ ಆಕೆ ರಾತ್ರಿ ವೇಳೆ ಪ.ಬಂಗಾಳ ಹೋಗಲು ರೈಲ್ವೇ ನಿಲ್ದಾಣಕ್ಕೆ ಬಿಡಲು ಆಟೋ ಡ್ರೆöÊವರಿಗೆ ಹೇಳುತ್ತಾಳೆ. ಆದರೆ ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಹೋಗದೇ ಆಟೋ ಡ್ರೆöÊವರ್ ಮತ್ತಿಬ್ಬರ ಗೆಳೆಯರನ್ನು ಕರೆಸಿ ಬೇರೊಂದು ಜಾಗಕ್ಕೆ ಹೋಗುತ್ತಾರೆ. ಆ ಜಾಗದಲ್ಲಿ ಆಕೆಗೆ ಚೆನ್ನಾಗಿ ಮದ್ಯಪಾನ ಮಾಡಿಸಿ, ಆಕೆ ಪ್ರಜ್ಞೆ ತಪ್ಪಿದ್ದು , ಪ್ರಜ್ಞೆ ಬಂದಾಗ ಅತ್ಯಾಚಾರ ನಡೆದಿರುವುದು ಆಕೆ ಗಮನಕ್ಕೆ ಬಂದಿದೆ. ಯುವತಿ ತನ್ನ ಹೇಳಿಕೆಯಲ್ಲಿ ತನ್ನ ಮೇಲೆ ಅತ್ಯಾಚಾರ ಆಗಿರುವುದಾಗಿ ಹೇಳಿದ್ದಾಳೆ. ವೈದ್ಯಕೀಯ ವರದಿ ಬಂದ ಬಳಿಕ ಅತ್ಯಾಚಾರ ಆಗಿದೆ ಇಲ್ಲವೋ ಅನ್ನುವುದು ದಢಪಡಿಸಲಾಗುವುದು.ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ನೀಡಿದ ಹೇಳಿಕೆಯಂತೆ ` ನಿನ್ನೆ ರಾತ್ರಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ಮಧ್ಯಾರಾತ್ರಿ 1.30 ಸುಮಾರಿಗೆ 112 ಒಂದು ಕರೆ ಬಂದಿರುತ್ತದೆ. ಒಂದು ಹುಡುಗಿ ಕೂಗಾಡುತ್ತಿದ್ದಾಳೆ. ಆಕೆಗೆ ಹಲ್ಲೆ ಮಾಡಿದ್ದಾರೆ ಎಂಬ ದೂರು ಸ್ವೀಕೃತವಾಗಿದೆ. ತಕ್ಷಣವೇ ಹೊಯ್ಸಳ ಘಟನಾ ಸ್ಥಳಕ್ಕೆ ತೆರಳಿ ಯುವತಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಅವಳು ಮಾತನಾಡುವ ಸ್ಥಿತಿಯಲ್ಲಿರದ ಕಾರಣ ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಲ್ಕಿ ನಿವಾಸಿ 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪ್ರಭುರಾಜ್ (38),. ನಿನ್ನೆ ಮಧ್ಯಾಹ್ನ 2.30 ಸುಮಾರಿಗೆ ಆಕೆಯನ್ನು ಆಟೋದಲ್ಲಿ ಪ್ರಭುರಾಜ್ ಪಿಕಪ್ ನಡೆಸಿದ್ದನು. ಆ ಬಳಿಕ ಪ್ರಭುರಾಜ್ ಕುಂಪಲ ನಿವಾಸಿ ಇಲೆಕ್ಟಿçÃಷಿಯನ್ ಕಾರ್ಯನಿರ್ವಹಿಸುವ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮತ್ತೋರ್ವ ಗೆಳೆಯ ಮಣಿ ಎಂಬಾತನನ್ನು ಕರೆದಿರುತ್ತಾರೆ. ಈ ಮೂವರು ಆಕೆಗೆ ಚೆನ್ನಾಗಿ ಕುಡಿಸಿ ಅವರು ಚೆನ್ನಾಗಿ ಕುಡಿದು ಅತ್ಯಾಚಾರ ಎಸಗಿದ್ದಾರೆ.
ಬೆಳಿಗ್ಗೆ ಅವಳ ಹೇಳಿಕೆ ಪ್ರಕಾರ ನಿನ್ನೆ ರಾತ್ರಿ ಯಾರೋ ಅವಳಿಗೆ ಮದ್ಯಪಾನ ಮಾಡಿಸಿದ್ದಾರೆ. ಆನಂತರ ಪ್ರಜ್ಞೆ ತಪ್ಪಿದ್ದು, ಕಾರಲ್ಲಿ ಮೂರು ಜನ ಇದ್ದಿದ್ದಾಗಿ ಯುವತಿ ತಿಳಿಸಿದ್ದಾಳೆ. ಪ್ರಜ್ಞೆ ಬಂದ ನಂತರ ಅವಳ ಒಳಉಡುಪು ಇರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಪ್ರಜ್ಞೆ ಬಂದು ಅವಳು ಕೂಗಾಡಲು ಶುರು ಮಾಡಿದಾಗ ಅವರು ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಆ ಬಳಿಕ ಸ್ಥಳೀಯರ ಸಹಾಯದೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾಳೆ. ಅವಳ ದೂರಿನ ಆಧಾರದಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ. ನಿನ್ನೆ ಬೆಳಿಗ್ಗೆ ತನ್ನ ಸಹಪಾಠಿ ಜೊತೆಗೆ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದಳು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *