
ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty Fazhil Brother) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗಿವೆ. ಈ ಕೊಲೆಯು ಈ ಹಿಂದೆ ನಡೆದಿದ್ದ ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, “ಒಟ್ಟು ಆರು ಮಂದಿ ಸೇರಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಈ ಕೃತ್ಯದ ಪ್ರಮುಖ ಆರೋಪಿ ಸಫ್ವಾನ್” ಎಂದು ತಿಳಿಸಿದರು.
ಬುರ್ಖಾಧಾರಿ ಮಹಿಳೆಯ ಪಾತ್ರ?:
ಕೃತ್ಯದ ಸಂದರ್ಭದಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬಳ ಪಾತ್ರದ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.
ಆ ಮಹಿಳೆ ಕೊಲೆ ಆರೋಪಿ ನಿಯಾಜ್ ನ ಸಂಬಂಧಿಕೆ.
ಯಾವುದೋ ಕೆಲಸಕ್ಕೆ ಆ ಹೆಂಗಸು ಅಲ್ಲಿ ಬಂದಿರೋದು ಆಗಿ ಹೇಳಿಕೊಂಡಿದ್ದಾಳೆ ಎಂದು ಅಗರ್ವಾಲ್ ತಿಳಿಸಿದರು.
ಹಾಗಾಗಿಯೂ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದರು.
ಕೊಲೆ ಆರೋಪಿಗಳು ಪಿಎಫ್ಐ ಕಾರ್ಯಕರ್ತರ ಎಂಬ ಬಗ್ಗೆ ಮಾಹಿತಿ ಇಲ್ಲ. ಅವರ ಸೋಷಿಯಲ್ ಮಿಡಿಯಾ ತಪಾಸಣೆ ಮಾಡುತ್ತಿದ್ದೇವೆ. ಆರೋಪಿಗಳು ಬಾಡಿಗೆಯಲ್ಲಿ ಆ ವಾಹನವನ್ನು ಪಡೆದುಕೊಂಡಿದ್ದರು ಎಂದು ಪೊಲೀಸ್ ಆಯುಕ್ತರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು
ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ – ಇಬ್ಬರು ಹಿಂದೂ ಯುವಕರ ಸಹಿತ 8 ಆರೋಪಿಗಳು ಅಂದರ್ – ಇಲ್ಲಿದೆ ಹಂತಕರ ವಿವರ
ಮಂಗಳೂರು: ನಗರದಲ್ಲಿ ಇತ್ತೀಚೆಗೆ ತಡರಾತ್ರಿ ಬರ್ಬರವಾಗಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹಾಗೂ ಪೊಲೀಸ್ ದಾಖಲೆಗಳ ಪ್ರಕಾರ ರೌಡಿ ಶೀಟರ್ ಆಗಿದ್ದ ಸುಹಾಸ್ ಶೆಟ್ಟಿ (Suhas Shetty) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ನಗರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ
ಅಬ್ದುಲ್ ಸಫ್ವಾನ್ (29): ಪೇಜಾವರ ನಿವಾಸಿ, ಪ್ರಸ್ತುತ ಬಜಪೆ ಕಿನ್ನಿಪದವುದಲ್ಲಿ ವಾಸ, ವೃತ್ತಿಯಲ್ಲಿ ಡ್ರೈವರ್.
ನಿಯಾಜ್ (28): ಬಜ್ಪೆ ಶಾಂತಿಗುಡ್ಡೆ ನಿವಾಸಿ, ಮೇಸ್ತ್ರಿ ಹೆಲ್ಪರ್ ಕೆಲಸ.
ಮೊಹಮ್ಮದ್ ಮುಝಮಿಲ್ (32): ಕೆಂಜಾರು ನಿವಾಸಿ, ಹಿಂದೆ ಸೌದಿಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದ, ಇತ್ತೀಚೆಗೆ ವಿವಾಹವಾಗಿದ್ದ. ಈತನ ಮೇಲೆ ಈ ಹಿಂದೆ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣ (IPC 392) ದಾಖಲಾಗಿದೆ.
ಕಲಂದರ್ ಶಾಫಿ (31): ಕಳವಾರು ನಿವಾಸಿ, ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್. ಈತನ ಮೇಲೆ ಸುರತ್ಕಲ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ರಂಜಿತ್ (19): ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವ, ಆದಿ ಕರ್ನಾಟಕ (SC) ಸಮುದಾಯಕ್ಕೆ ಸೇರಿದವ, ವೃತ್ತಿಯಲ್ಲಿ ಡ್ರೈವರ್. ಕೃತ್ಯಕ್ಕೆ ಬಳಸಿದ ಲಾಂಗ್ (ಮಚ್ಚು) ಅನ್ನು ಕಾರಿನಿಂದ ತೆಗೆದುಕೊಟ್ಟ ಆರೋಪ ಈತನ ಮೇಲಿದೆ.
ನಾಗರಾಜ್ (20): ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವ, ಒಕ್ಕಲಿಗ ಗೌಡ ಸಮುದಾಯದವ, ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಾನೆ.
ಮೊಹಮ್ಮದ್ ರಿಜ್ವಾನ್ (28): ಜೋಕಟ್ಟೆ ನಿವಾಸಿ, ಹಿಂದೆ ಸೌದಿ ಅರೇಬಿಯಾದಲ್ಲಿ ಆಯಿಲ್ ಪ್ಲಾಂಟ್‌ನಲ್ಲಿ ಕೆಲಸ ಮಾಡುತ್ತಿದ್ದ.
ಅದಿಲ್ ಮೆಹರೂಫ್: (ಈತನ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ).
ಬಂಧಿತರಲ್ಲಿ ಮಂಗಳೂರು ಸ್ಥಳೀಯರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಯುವಕರೂ ಸೇರಿದ್ದಾರೆ. ಕೆಲವರ ಮೇಲೆ ಈ ಹಿಂದೆಯೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ. ಕೊಲೆಯ ಹಿಂದಿನ ನಿಖರ ಕಾರಣ, ಸಂಚು ಹಾಗೂ ಇದರಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


