
https://www.facebook.com/share/1XgMV9NmiT
ಜಿಲ್ಲಾಧಿಕಾರಿಯವರ ಫೇಕ್ಏಕೌಂಟ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಾನ್ಯ ಮುಲೈ ಮುಗಿಲನ್ ಅವರ ಹೆಸರಿನಲ್ಲಿ ತೆರೆಯಲಾಗಿರುವ ನಕಲಿ ಫೇಸ್ ಬುಕ್ ಖಾತೆಯ ಮೂಲಕ ಖದೀಮರು, ಸಾಮಾನ್ಯ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಒಂದು ವೇಳೆ ಈ ರಿಕ್ವೆಸ್ಟ್‌ಗಳನ್ನು ಸ್ವೀಕರಿಸಿದರೆ, ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕಾಸಿನ ವಂಚನೆಗೆ ಒಳಪಡಿಸುವ ಸಾಧ್ಯತೆ ಇದೆ.
ಮಂಗಳೂರು: ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ನಕಲಿ ಅಕೌಂಟ್ ಕ್ರಿಯೇಟ್ ಮಾಡಿ ಹಣ ಪೀಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಫೇಸ್‌ಬುಕ್‌ಗಳಲ್ಲಿ ನಿಮಗೂ ಅಂತಹ ನಕಲಿ ಅಕೌಂಟ್‌ಗಳಿಂದ ಮೆಸೇಜ್‌ಗಳು ಬಂದಿರುತ್ತವೆ. ಆದರೆ ಇಲ್ಲೊಬ್ಬ ಕಿರಾತಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಾನ್ಯ ಮುಲೈ ಮುಗಿಲನ್ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದಿದ್ದಾನೆ. ಜನಸಾಮಾನ್ಯರಿಗೆ ಸ್ನೇಹಿತರ ರಿಕ್ವೆಸ್ಟ್ ಕಳುಹಿಸುವ ಮೂಲಕ ವಂಚನೆಗೆ ಯತ್ನಿಸುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಇದೀಗ ಆ ನಕಲಿ ಅಕೌಂಟ್ ಸ್ಕ್ರೀನ್‌ಶಾಟ್ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಅದಲ್ಲದೆ ಇಂದು ಉದ್ಘಾಟನೆಗೊಳ್ಳಲಿರುವ ನೂತನ ಪ್ರಜಾ ಸೌಧದ ಫೋಟೋಗಳನ್ನು ಕೂಡ ಅಪ್ಲೋಡ್ ಮಾಡಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರ ಹೆಸರಿನಲ್ಲಿ ತೆರೆಯಲಾಗಿರುವ ಈ ನಕಲಿ ಫೇಸ್‌ಬುಕ್ ಖಾತೆಯ ಮೂಲಕ ಖದೀಮರು, ಸಾಮಾನ್ಯ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಒಂದು ವೇಳೆ ಈ ರಿಕ್ವೆಸ್ಟ್‌ಗಳನ್ನು ಸ್ವೀಕರಿಸಿದರೆ, ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕಾಸಿನ ವಂಚನೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಈ ಖಾತೆಯಿಂದ ಕಳುಹಿಸಲಾಗುವ ಸಂದೇಶಗಳು ಅಥವಾ ರಿಕ್ವೆಸ್ಟ್‌ಗಳು ಜಿಲ್ಲಾಧಿಕಾರಿಗಳಿಂದ ಬಂದಿರುವಂತೆ ತೋರಿಸುವಂತೆ ರಚಿತವಾಗಿವೆ, ಇದು ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ


