ಮಂಡ್ಯ – ಹೆಲ್ಮೆಟ್ ಹಾಕದ ಬೈಕ್ ಸವಾರನ ಏಕಾಏಕಿ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸ್ – ಬೈಕ್ ನಲ್ಲಿದ್ದ ಮಗು ರಸ್ತೆಗೆ ಬಿದ್ದು ಸಾವು

ಮಂಡ್ಯ ಮೇ 26: ಹೆಲ್ಮೆಟ್ ಹಾಕದೆ ಬರುತ್ತಿದ್ದ ಬೈಕ್ ಸವಾರನನ್ನು ಏಕಾಏಕಿ ಟ್ರಾಫಿಕ್ ಪೊಲೀಸರು ಅಡ್ಡಗಟ್ಟಿದ ಪರಿಣಾಮ ಬೈಕ್ ನಿಯಂತ್ರಣ ಕಳೆದುಕೊಂಡು ಬೈಕ್ ನಲ್ಲಿದ್ದ ಮೂರು ವರ್ಷದ ಮಗು ರಸ್ತೆ ಬಿದ್ದು ಸಾವನಪ್ಪಿದ ಘಟನೆ ಮಂಡ್ಯದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ವಾಣಿ-ಅಶೋಕ್ ಎಂಬ ದಂಪತಿಗೆ ಸೇರಿದ ಮೂರೂವರೆ ವರ್ಷದ ಹೃತೀಕ್ಷ ಮೃತಪಟ್ಟಿದ್ದಾಳೆ. ದಂಪತಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೊರವನಹಳ್ಳಿಯ ನಿವಾಸಿ. ವಾಣಿ-ಅಶೋಕ್ ಪುತ್ರಿ ಹೃತೀಕ್ಷಗೆ ನಾಯಿ ಕಚ್ಚಿತ್ತು. ಹೀಗಾಗಿ ಆ ಕೂಡಲೇ ಮಗುವನ್ನು ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಟ್ರಾಫಿಕ್​ ಪೊಲೀಸರು ಹೆಲ್ಮೆಟ್ ತಪಾಸಣೆಗೆಂದು ಬೈಕ್ ಅಡ್ಡಗಟ್ಟಿದ್ದಾರೆ. ಇದೇ ವೇಳೆ ಬೈಕ್​ನಲ್ಲಿದ್ದ ತಂದೆ, ತಾಯಿ ಹಾಗೂ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ವೇಳೆ ಮಗು ಹೃತೀಕ್ಷ ತಲೆಯ ಮೇಲೆ ಹಿಂದಿನಿಂದ ಬಂದ ಟೆಂಪೋ ಹರಿದಿದೆ. ಇದರಿಂದ ತಲೆಗೆ ಭಾರೀ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಾಳೆ. ಆಕೆಯ ಮರಣದಿಂದ ಆಘಾತಕ್ಕೊಳಗಾದ ಪೋಷಕರು ರಸ್ತೆಯ ಮಧ್ಯೆ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ ದುಃಖದ ದೃಶ್ಯ ಅಲ್ಲಿ ನೆರೆದಿದ್ದವರ ಕಣ್ಣು ನೀರಾಗುವಂತೆ ಮಾಡಿದೆ.

ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಶವವಿಟ್ಟು ಅಳುತ್ತಿದ್ದಾರೆ. ಅಲ್ಲದೇ ಪೊಲೀಸರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಂಡ್ಯ ಮಿಮ್ಸ್ ಆಸ್ಪತ್ರೆ ಎದುರಿನ ಹೆದ್ದಾರಿ ತಡೆದು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ

News Editor

Learn More →

Leave a Reply

Your email address will not be published. Required fields are marked *