ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ: ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ.

ಉಡುಪಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೆ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿ ಯಾಗಿ ನೇಮಿಸಲಾಗಿದೆ

News Editor

Learn More →

Leave a Reply

Your email address will not be published. Required fields are marked *