ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ; ಆಸ್ಪತ್ರೆ ಸೇರಿದ ಕಲ್ಲೇಗ ಕೇಸ್‌ ಆರೋಪಿ

ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗುರುವಾರ ಮತ್ತೆ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲದ ಮುಕ್ತಾರ್ ಮತ್ತು ಇತರ ಕೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜೈಲಿನಲ್ಲಿ ಹೊಡೆದಾಟ ನಡೆದಿದೆ ಎನ್ನಲಾಗಿದೆ.

ಉಳ್ಳಾಲದ‌ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಇತರೆ ಕೈದಿಗಳ ಮಧ್ಯೆ ಗಲಾಟೆಯಾಗಿದೆ. ಮುಖ್ತಾರ್ ಮತ್ತೊಬ್ಬ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

2023ರ ನ.6ರಂದು ನಡೆದಿದ್ದ ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿ ಕೇಶವ ಜೈಲಿವಾಸ ಅನುಭವಿಸುತ್ತಿದ್ದಾನೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಆರೋಪಿ ಮಹಮದ್ ಮುಖ್ತಾರ್ 15 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2022ರ ಜುಲೈನಲ್ಲಿ ಈತನ ಕಾಲಿಗೆ ಗುಂಡಿಕ್ಕಿ ಬಂಧನ ಮಾಡಲಾಗಿತ್ತು. ಸದ್ಯ ಜೈಲು ಗಲಾಟೆ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲಿಗೆ ಬರ್ಕೆ ಠಾಣೆ ಪೊಲೀಸರು ಹಾಗೂ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *