ತಡರಾತ್ರಿ ಮನೆಗೆ ನುಗ್ಗಿ ಯುವಕನ ಬರ್ಬರ ಹತ್ಯೆ

ಉಡುಪಿ: ತಡರಾತ್ರಿ ಮನೆಗೆ ನುಗ್ಗಿ ಮನೆಯವರ ಮುಂದೆಯೇ ಯುವಕನ ಬರ್ಬರ ಕೊಲೆ ನಡೆದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯ ನಗರ 9ನೇ ಅಡ್ಡರಸ್ತೆಯಲ್ಲಿ ಅಗಸ್ಟ್ 12 ರಂದು ರಾತ್ರಿ ವೇಳೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಸ್ತಳೀಯ ನಿವಾಸಿ ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ವಿನಯ್ ದೇವಾಡಿಗ, ಮಂಗಳವಾರ ವೈಯಕ್ತಿಕ ಕೆಲಸದ ನಿಮಿತ್ತ ಉಡುಪಿಗೆ ಹೋಗಿ ಸಂಜೆ 6 ಗಂಟೆಗೆ ಮನೆಗೆ ಬಂದು ಕೋಣೆಯಲ್ಲಿ ಮಲಗಿದ್ದರು. ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮನೆಯ ಎಲ್ಲಾ ಕಡೆಗಳಲ್ಲಿ ವಿನಯ್ ಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಕೋಣೆಯಲ್ಲಿದ್ದ ವಿನಯ್ ಶಬ್ದದಿಂದ ಎಚ್ಚರಗೊಂಡಾಗ ಆರೋಪಿಗಳು ವಿನಯ್ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಪ್ರಯತ್ನಪಟ್ಟರು. ನಂತರ ಅಜಿತ್, ವಿನಯ್ ನನ್ನು ತಪ್ಪಿಸಿಕೊಳ್ಳದಂತೆ ಗಟ್ಟಿಯಾಗಿ ಹಿಡಿದುಕೊಂಡ. ಆಕ್ಷೇಂದ್ರ ಹಾಗೂ ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ಅವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾದರು ಎಂದು ದೂರಲಾಗಿದೆ.

ವಾಟ್ಯಾಪ್ ನಲ್ಲಿ ಆಡಿಯೋ ಒಂದನ್ನು ಪಾರ್ವಡ್ ಮಾಡಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ.

News Editor

Learn More →

Leave a Reply

Your email address will not be published. Required fields are marked *