ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ

ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಗೆ ಇಂದು ಆಗಸ್ಟ್ 13ರಂದು ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಉಪತಹಶೀಲ್ದಾರ್ ರಾಜೇಶ್ ನಾಯ್ಕ, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ಗಣೇಶ್ ಇವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಸಜೀಪಮುನ್ನೂರಿನ ಪುಷ್ಪರಾಜ್ ರವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಿ.ಸಿ.ರೋಡಿನ ದೇವಸ್ಥಾನವೊಂದರ ಬಳಿ ಮಧ್ಯವರ್ತಿಯ ಮೂಲಕ ಹಣ ವ್ಯವಹಾರ ನಡೆಸುವ ಸಂದರ್ಭದಲ್ಲಿ ಪ್ರಕರಣವನ್ನು ಬೇಧಿಸಲಾಗಿದೆ.

ಲೋಕಾಯುಕ್ತ ಎಸ್ಪಿ ಕುಮಾರಚಂದ್ರರವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿಗಳಾದ ಗಾನಾ ಪಿ. ಕುಮಾರ್, ಸುರೇಶ್ ಕುಮಾರ್, ಇನ್ಸ್‌ಪೆಕ್ಟರ್ ಚಂದ್ರಶೇಖರ, ಭಾರತಿ ಹಾಗೂ ಸಿಬ್ಬಂದಿ ವರ್ಗ ಸೇರಿ ದಾಳಿ ನಡೆಸಿದೆ.

News Editor

Learn More →

Leave a Reply

Your email address will not be published. Required fields are marked *