ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯ ಮುಂದುವರಿದ ಭಾಗವಾಗಿ ಬಿಪಿಎಲ್ ಎಪಿಎಲ್ ಎಂಬ ಮಾನದಂಡ ಇಲ್ಲದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಆಯುಷ್ಮಾನ್ ಭಾರತ್ ವಯೋ ವಂದನಾ ಯೋಜನೆ ಜಾರಿಗೊಳಿಸಿದೆ.
ಆದರೆ ಈ ಮಹತ್ವಪೂರ್ಣ ಯೋಜನೆ ನಮ್ಮ ರಾಜ್ಯದಲ್ಲಿ ಜಾರಿಯಾಗದಿರುವುದು ವಿಷಾದನೀಯ. ಸರ್ಕಾರ ಈ ಕೂಡಲೇ ಎಚ್ಚೆತ್ತು ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಬೇಕು.


