
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಮುಸುಕುಧಾರಿಯನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಸ್ಕ್ ಮ್ಯಾನ್ ತೋರಿದ 15 ಜಾಗಗಳಲ್ಲಿ ಎಸ್ ಐಟಿ ಅಧಿಕಾರಿಗಳು ಅಸ್ಥಿಪಂಜರಕ್ಕಾಗಿ ಶೋಧ ನಡೆಸಿದ ಬಳಿಕ ಮಾಸ್ಕ್ ಮ್ಯಾನ್ ನನ್ನು ಸುದೀರ್ಘ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಆತ ಹೇಳಿದ್ದು ಸುಳ್ಳು ಎಂಬುದು ಬಯಲಾಗಿದೆ. ತಾನು ಸುಳ್ಳು ಹೇಳಿದ್ದಾಗಿ ಆತ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಮ್ಯಾನ್ ನನ್ನು ಎಸ್ ಐಟಿ ಬಂಧಿಸಿದೆ.
ಆಗಸ್ಟ್ 23ರ ಮುಂಜಾವಿನ ತನಕ ಎಸ್. ಐ. ಟಿ ಮುಸುಕುಧಾರಿಯ ನಿರಂತರ ವಿಚಾರಣೆ ನಡೆಸಿ ನಂತರ ಬಂಧಿಸಿದ್ದು, ಬೆಳಗ್ಗೆ 11ಗಂಟೆಗೆ ಕೋರ್ಟ್ ಗೆ ಹಾಜರುಪಡಿಸಲಿದೆ.


