ಮೂಡಬಿದಿರೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮೂಡಬಿದಿರೆ: ಮಾರ್ಪಾಡಿ ಗ್ರಾಮದ ಆಳ್ವಾಸ್ ಆಸ್ಪತ್ರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಕಟ್ಟಡದ ಮಹಡಿಯೊಂದರಲ್ಲಿ ವೇಶ್ಯಾವಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಮೂಡಬಿದಿರೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಸ್ವರಾಜ್ಯ ಮೈದಾನದ ಬಳಿಯ ನಿವಾಸಿ ರಾಜೇಶ್ ಬೋವಿ ಹಾಗೂ ಬೆಳ್ತಂಗಡಿ ತಾಲೂಕಿನ ನಾರಾವಿ ನಿವಾಸಿ ಭರತ್ ಜೈನ್ ಎಂದು ಗುರುತಿಸಲಾಗಿದೆ.ಮೂಡಬಿದಿರೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದಾಗಿ ಖಚಿತ ಮಾಹಿತಿ ಪಡೆದ ಪೊಲೀಸ್‌ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *