ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ : ದಂಪತಿಗೆ ಗಂಭೀರ ಗಾಯ

ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪುತ್ತೂರು ತಾಲೂಕಿನ ನೆಲ್ಯಾಡಿ ಗ್ರಾಮದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಆ.29ರಂದು ಮಧ್ಯಾಹ್ನದ ವೇಳೆ ನಡೆದಿದೆ.ಗಾಯಾಳುಗಳನ್ನು ಹಿರೇಬಂಡಾಡಿ ಗ್ರಾಮದ ವಳಕಡಮ ನಿವಾಸಿ ಬೊಮ್ಮಣ್ಣ ಗೌಡ(46ವ.)ಹಾಗೂ ಅವರ ಪತ್ನಿ ಕುಸುಮಾವತಿ(35ವ.) ಎಂದು ಗುರುತಿಸಲಾಗಿದೆ.ಇವರು ತಮ್ಮ ದ್ವಿಚಕ್ರ ವಾಹನದಲ್ಲಿ ವಳಕಡಮದಿಂದ ರಾಮಕುಂಜ-ಗೋಳಿತ್ತೊಟ್ಟು ಮಾರ್ಗವಾಗಿ ಸೌತಡ್ಕ ದೇವಸ್ಥಾನಕ್ಕೆ ಹೋಗುತ್ತಿದರು. ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಕ್ರಾಸ್ ಆಗುತ್ತಿದ್ದಂತೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.ಘಟನೆಯಲ್ಲಿ ಬೊಮ್ಮಣ್ಣ ಗೌಡ ಹಾಗೂ ಕುಸುಮಾವತಿಯವರು ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”