ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಪುತ್ತೂರು (ಆ-29): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬದಲಾವಣೆಗಾಗಿ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲವರ್ಧನೆ ಮಾಡುವ ಬಗ್ಗೆ ಹಾಗೂ ಜನರ ಮೂಲಭೂತ ಸಮಸ್ಯೆಗಳಿಗೆ ಪ್ರಮುಖವಾಗಿ ಆದ್ಯತೆ ನೀಡಿ ಸ್ಪಂದಿಸಿ ಇನ್ನಷ್ಟು ಹತ್ತಿರವಾಗಬೇಕೆಂದು ಕರೆ ನೀಡಿದರು.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ ಅಧಿಕಾರದಲ್ಲಿರುವ ಪಕ್ಷಗಳು ಕಾರ್ಪೋರೆಟ್ ಕುಳಗಳನ್ನು ಮೆಚ್ಚಿಸುತ್ತಿವೆಯೇ ಹೊರತು ಜನರ ಪರವಾಗಿಲ್ಲ, ಇಲ್ಲಿರುವ ಮುಸ್ಲಿಮರನ್ನು ಹಾಗೂ ಹಿಂದುಳಿದ ವರ್ಗದವರನ್ನು ಬಿಜೆಪಿ ಕೋಮುವಾದದ ಹೆಸರಿನಲ್ಲಿ ದಾಳಿ ಮಾಡುತ್ತಿದೆ ಹಾಗೂ ತಾರತಮ್ಯ ಮಾಡುತ್ತಿದೆ ಮತ್ತು ಈಕಡೆ ಕಾಂಗ್ರೆಸ್ ದ್ರೋಹವನ್ನೇ ಬಗೆಯುತ್ತಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಸುಲೈಮಾನ್ ಬಿ.ಕೆ, ಕಾರ್ಯದರ್ಶಿ ಉಸ್ಮಾನ್ ಎ.ಕೆ ಉಪಸ್ಥಿತರಿದ್ದರು.

ಪುತ್ತೂರು ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ರಹೀಂ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”