ಪುತ್ತೂರಿನಲ್ಲಿ ಸೆ.3ರಂದು ನೂರುಲ್ ಹುದಾ ಅಕಾಡೆಮಿಯಿಂದ ಮಿಲಾದ್ ಸೌಹಾರ್ದ ನಡಿಗೆ

ಪುತ್ತೂರು: ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿ ವತಿಯಿಂದ ಮಾಡನ್ನೂರಿನಲ್ಲಿ ಕಾರ್ಯಾಚರಿಸುತ್ತಿರುವ ನೂರುಲ್ ಹುದಾ ಶಿಕ್ಷಣ ಸಂಸ್ಥೆಯ 10ನೇ ವಾರ್ಷಿಕ ಮಹಾ ಸಮ್ಮೇಳನದ ಅಂಗವಾಗಿ ಸೆ. 3ರಂದು ಪುತ್ತೂರು ನಗರದಲ್ಲಿ ಮಿಲಾದ್ ಸೌಹಾರ್ದ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ ಅವರು ತಿಳಿಸಿದ್ದಾರೆ.

ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸಂಸ್ಥೆಯ 10ನೇ ವಾರ್ಷಿಕ ಮಹಾ ಸಮ್ಮೇಳನ ದಿ.5ರಿಂದ 7ರ ತನಕ ನಡೆಯಲಿದೆ. ಇದರ ಅಂಗವಾಗಿ ಶಾಂತಿ, ಸೌಹಾರ್ದ ಮತ್ತು ಸಹೋದರತ್ವದ ವಾತಾವರಣವನ್ನು ನಿರ್ಮಿಸುವ ನಿಟ್ಟಿನಲ್ಲಿ ಮಿಲಾದ್ ಸೌಹಾರ್ದ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ನಡಿಗೆಯು ಸಂಜೆ 3 ಗಂಟೆಗೆ ದರ್ಬೆ ಜಂಕ್ಷನ್‌ನಿಂದ ಆರಂಭಗೊಂಡು ಕಿಲ್ಲೆ ಮೈದಾನದಲ್ಲಿ ಸಮಾಪನಗೊಳ್ಳಲಿದೆ ಎಂದು ಹೇಳಿದರು.

ಸುದ್ಧಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ರಶೀದ್ ಹಾಜಿ ಪರ್ಲಡ್ಕ, ಉಪ್ಪಿನಂಗಡಿ ವಲಯ ಕಾರ್ಯಾಧ್ಯಕ್ಷ ಯುನಿಕ್ ಅಬ್ದುಲ್ ರಹಿಮಾನ್, ಪುತ್ತೂರು ವಲಯಾಧ್ಯಕ್ಷ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಪ್ರದಾನ ಕಾರ್ಯದರ್ಶಿ ಅಬೂಬಕ್ಕರ್ ಕಲ್ಲರ್ಪೆ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *