ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ- ಆರೋಪಿ ಪುತ್ತೂರಿನ ಶ್ರೀಕೃಷ್ಣ ಜೆ.ರಾವ್ ಜೈಲಿನಿಂದ ಬಿಡುಗಡೆ.

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ.

ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.೩ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.೪ರಂದು ಮುಗಿಸಿ ಆರೋಪಿಯನ್ನು ಮಂಗಳೂರು ಜೈಲಿನಿಂದ ಬಿಡುಗಡೆಗೊಳಿಸಿ ಕರೆತರಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.

ಆರೋಪಿ ಪರ ಹೈಕೋರ್ಟ್‌ನಲ್ಲಿ ಖ್ಯಾತ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು. ಪುತ್ತೂರು ನ್ಯಾಯಾಲಯದಲ್ಲಿ ಸುರೇಶ್ ರೈ ಪಡ್ಡಂಬೈಲು, ರಾಘವ ಪಿ ಮತ್ತು ದೀಪಕ್ ರೈ ವಾದಿಸಿದ್ದರು

News Editor

Learn More →

Leave a Reply

Your email address will not be published. Required fields are marked *