


ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ತಾಲೂಕು ಈದ್ ಮಿಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ)ಅವರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ 33ನೇ ವರ್ಷದ ಮೀಲಾದ್ ರ್ಯಾಲಿಯು ಶುಕ್ರವಾರ ಸಂಜೆ ನಡೆಯಿತು. ಪುತ್ತೂರಿನ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ಕಾಲ್ನಡಿಗೆ ಮೂಲಕ ಹೊರಟ ರ್ಯಾಲಿಯು ಮುಖ್ಯ ರಸ್ತೆಯಲ್ಲಿ ಸಾಗಿ ಕಿಲ್ಲೆ ಮೈದಾನದಲ್ಲಿ ಸಮಾಪನಗೊಂಡಿತು. ರ್ಯಾಲಿಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು.
ಜಾಥಾಕ್ಕೆ ಉದ್ಯಮಿ ಖಲಂದರ್ ಈಸ್ಟರ್ನ್ ಧ್ವಜ ಹಸ್ತಾಂತರ ಮಾಡುವ ಮೂಲಕ ದರ್ಬೆಯಲ್ಲಿ ಚಾಲನೆ ನೀಡಿದರು. ಉದ್ಯಮಿ ಜುನೈದ್ ಬಿಜಿ ಧ್ವಜ ಸ್ವೀಕಾರ ಮಾಡಿದರು. ಆಸಿಫ್ ಪರ್ಲಡ್ಕ ಮತ್ತು ಹಾಜಿ ರಫೀಕ್ ಧ್ವಜಾರೋಹಣ ನೆರವೇರಿಸಿದರು. ಜಾಥಾದಲ್ಲಿ ವಿವಿದ ತಂಡಗಳಿಂದ ದಫ್. ತಾಲೀಮು, ಹೂಗುಚ್ಚ ಕವಾಯತು ಹಾಗೂ ಇಸ್ಲಾಮಿಕ್ ಕಲಾ ಸಾಹಿತ್ಯಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ಜಾಥಾದಲ್ಲಿ ಸಹಸ್ರರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು

