
ಮಂಗಳೂರು: ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕಾವೂರು ಕೆಎಚ್‌ಬಿ ಕಾಲೋನಿಯ ದೇವಿ ನಗರ ನಿವಾಸಿ ವಿಶಾಲ್ ಕುಮಾರ್(26) ಎಂದು ಗುರುತಿಸಲಾಗಿದೆ.2016ರಲ್ಲಿ ಕಾವೂರು ರಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಈತ ಮೂರನೇ ಆರೋಪಿಯಾಗಿದ್ದು, 2022ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದಾಗಿ ಈತನ ವಿರುದ್ಧ ನ್ಯಾಯಾಲಯ ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಆರೋಪಿ ದುಬೈಗೆ ಹೋಗಿರುವ ಖಚಿತ ಮಾಹಿತಿ ಮೇರೆಗೆ ಎಲ್‌ಒಸಿ ಹೊರಡಿಸಲಾಗಿತ್ತು. ಸೆಪ್ಟೆಂಬರ್ 4ರಂದು ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ಬ್ಯೂರೋ ಆಫ್ ಇಮಿಗ್ರೇಷನ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಕಾವೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸೆ.18 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ವಿರುದ್ಧ ಬರ್ಕೆ ಪೊಲೀಸ್ ರಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಸೆ.18 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
