3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕಾವೂರು ಕೆಎಚ್‌ಬಿ ಕಾಲೋನಿಯ ದೇವಿ ನಗರ ನಿವಾಸಿ ವಿಶಾಲ್ ಕುಮಾರ್(26) ಎಂದು ಗುರುತಿಸಲಾಗಿದೆ.2016ರಲ್ಲಿ ಕಾವೂರು ರಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಈತ ಮೂರನೇ ಆರೋಪಿಯಾಗಿದ್ದು, 2022ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದಾಗಿ ಈತನ ವಿರುದ್ಧ ನ್ಯಾಯಾಲಯ ದಸ್ತಗಿರಿ ವಾರೆಂಟ್‌ ಹೊರಡಿಸಿತ್ತು. ಆರೋಪಿ ದುಬೈಗೆ ಹೋಗಿರುವ ಖಚಿತ ಮಾಹಿತಿ ಮೇರೆಗೆ ಎಲ್‌ಒಸಿ ಹೊರಡಿಸಲಾಗಿತ್ತು. ಸೆಪ್ಟೆಂಬರ್ 4ರಂದು ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ಬ್ಯೂರೋ ಆಫ್ ಇಮಿಗ್ರೇಷನ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಕಾವೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸೆ.18 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ವಿರುದ್ಧ ಬರ್ಕೆ ಪೊಲೀಸ್‌ ರಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಸೆ.18 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.