
ಮಂಗಳೂರು: ಒಂದು ವರ್ಷಕ್ಕೂ ಹೆಚ್ಚು ಕಾಲ ನ್ಯಾಯಾಲಯದ ವಾರೆಂಟ್ ಗಳನ್ನು ತಪ್ಪಿಸಿಕೊಂಡಿದ್ದ ವ್ಯಕ್ತಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಸಂಬಂಧ ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿ ಮೊಹಮ್ಮದ್ ನವಾಜ್ (34) ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಪರಾರಿಯಾಗಿದ್ದ ಆರೋಪಿ ನವಾಜ್ ನ್ಯಾಯಾಲಯ ಹೊರಡಿಸಿದ ಹಲವಾರು ವಾರೆಂಟ್ ಗಳಿಗೆ ಸಂಬಂಧಿಸಿದ ಕಾನೂನು ಕ್ರಮಗಳನ್ನು ತಪ್ಪಿಸುತ್ತಿದ್ದ, ಕೊನೆಗೆ ಉಳ್ಳಾಲ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನವಾಜ್ ಈ ಹಿಂದೆ ಬಬ್ಬುಕಟ್ಟೆಯ ಖಾಸಗಿ ಶಾಲೆಯಲ್ಲಿ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ, ಅಲ್ಲದೇ ಆತನ ವಿರುದ್ಧ ಅವರ ಮೊದಲ ಪತ್ನಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ಜೀವನಾಂಶ ಕೋರಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ಕೂಡ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
