ಅಡವಿಟ್ಟ ಫ್ಲ್ಯಾಟ್ ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿದ ಮೊಹಮ್ಮದ್ ಶಾಕೀರ್..!

ಕುಂದಾಪುರ: ವ್ಯಕ್ತಿಯೋರ್ವ ಅಡವಿಟ್ಟ ಫ್ಲ್ಯಾಟ್ ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

ಮರವಂತೆಯ ಮೊಹಮ್ಮದ್ ಶಾಕಿರ (39) ಬ್ಯಾಂಕ್‌ಗೆ ವಂಚನೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯಾಗಿದ್ದಾನೆ. ಆರೋಪಿಯು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಯಲ್ಲಿ ಅಡಮಾನ ಇರಿಸಿದ್ದ ಫ್ಲ್ಯಾಟ್ ಅನ್ನು ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಕೋಟೇಶ್ವರ ಗ್ರಾಮದ ‘ಜ್ಯೂಲಿ ಯೋ ರೆಸಿಡೆನ್ಸಿ’ ನೆಲಮಹಡಿಯಲ್ಲಿರುವ ಅಪಾರ್ಟ್ಮೆಂಟ್ ನಂಬ್ರ 7ನ್ನು ಅಡಮಾನವಿರಿಸಿ ಮೊಹಮ್ಮದ್ 55 ಲಕ್ಷ ರೂ. ಸಾಲ ಪಡೆದುಕೊಂಡಿದ್ದ.

ಆರೋಪಿಯೂ ಮೂಲ ದಾಖಲೆಗಳು ಬ್ಯಾಂಕ್‌ನಲ್ಲಿರುವಾಗಲೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಮಣಿಪಾಲ ಶಾಖೆಯಲ್ಲಿ 45 ಲಕ್ಷ ರೂ. ಸಾಲ ಪಡೆಯಲು ಯತ್ನಿಸಿದಾಗ ಅಲ್ಲಿನ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣ ದಾಖಲಾಗಿದೆ. ಹಾಗಿದ್ದರೂ ಆರೋಪಿಯು ಆ ಫ್ಲ್ಯಾಟ್ ಅನ್ನು ಇನ್ನೊಬ್ಬ ಆರೋಪಿ ವಸಂತ ಕುಮಾರ ಕಿದಿಯೂರು ಹೆಸರಿನಲ್ಲಿ ಕುಂದಾಪುರ ಉಪನೋಂದಣಿ ಕಚೇರಿಯಲ್ಲಿ ನೊಂದಣಿ ಮಾಡಿಸಿಕೊಂಡು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಗೆ ನಂಬಿಕೆ ದ್ರೋಹ ಎಸಗಿ ವಂಚಿಸಿ ಮೋಸ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು. ತನಿಖೆ ಮುಂದುವರೆದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.