ಕಾರವಾರದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಹುತಾತ್ಮ ಅರಣ್ಯ ರಕ್ಷಕರ ಸ್ಮರಣೆಯನ್ನು ಮಾಡಲಾಯಿತು. ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಸಿಬ್ಬಂದಿಗಳು ಕುಶಾಲಾತೋಪು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡ್ಬೊಲೆ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ ಉಪಸ್ಥಿತಿಯಿದ್ದು, ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು.

News Editor

Learn More →

Leave a Reply

Your email address will not be published. Required fields are marked *