ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅರೆಸ್ಟ್

ಮೂಡಬಿದಿರೆ: ಕೋಮು ಪ್ರಚೋದನೆ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯನ್ನು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಮೂಡಬಿದಿರೆ ಪಿಎಸ್ಸೈ ಕೃಷ್ಣಪ್ಪ ಎಂಬವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಕೋರ್ಟ್ಗೆ ಹಾಜರುಪಡಿಸಿದ್ದು, ಸೋಮವಾರದ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಸಿಎಂ ಸಿದ್ದರಾಮಯ್ಯರ ಫೋಟೋವನ್ನು ಎಡಿಟ್ ಮಾಡಿ ಕೋಮು ಪ್ರಚೋದನೆ ಆರೋಪ ಇವರ ಮೇಲಿದೆ. ‘ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ. ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂಥಹ ಪ್ರಕರಣ ಮರುಕಳಿಸಲ್ಲ ಎಂದು ಪೋಸ್ಟ್ ಹಾಕಿದ್ದರು.ಎರಡು ಧರ್ಮಗಳ ನಡುವೆ ವೈರತ್ವ ಮತ್ತು ದ್ವೇಷ ಭಾವನೆ ಮೂಡಿಸಿ ಕೋಮುಗಲಭೆ ಸೃಷ್ಟಿಸುವಂತಹ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸುವ ಉದ್ದೇಶದಿಂದ ಪೋಸ್ಟ್ ಹಾಕಿದ ಆರೋಪದ ಮೇಲೆ ಸೆ.9ರಂದು ಎಫ್ಐಆರ್ ದಾಖಲಿಸಲಾಗಿತ್ತು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.