ಮಂಗಳೂರಿನಲ್ಲಿ ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕದ್ದ ಮಹಿಳೆಯ ಬಂಧನ

ಮಂಗಳೂರು: ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಸೆ.12 ರಂದು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ಮೂಲದ ಮಿನ್ನತ್ ಬಂಧಿತ ಆರೋಪಿಯಾಗಿದ್ದು ಕದ್ದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂ.2 ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ರಹಮತ್ ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟಿನಲ್ಲಿರುವ ಸಾಗರ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಹೋಗಿದ್ದರು. ಮಳೆಯ ಕಾರಣ ಅವರು ಸ್ಟ್ರೀಟ್ ಪ್ಯಾಲೇಸ್ ಬೇಕರಿ ಬಳಿ ನಿಂತಿದ್ದರು.

ಆ ಸಂದರ್ಭದಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬರು ಅವರ ಮಗಳ ಕುತ್ತಿಗೆಯಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ವಿಚಾರಣೆ ವೇಳೆ ಆರೋಪಿ ಮಹಿಳೆಯು ಜುಲೈ 9 ರಂದು ಕೆಎಂಎಸ್ ಕನ್ವೆನ್ಷನ್ ಹಾಲ್ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಬ್ಯಾಗ್ ನಿಂದ 8 ಗ್ರಾಂ ಚಿನ್ನದ ಸರವನ್ನು ಕದ್ದಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈ ಸರವನ್ನೂ ಸಹ ವಶಪಡಿಸಿಕೊಂಡಿದ್ದಾರೆ.

ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಆರೋಪಿಯಿಂದ ಒಟ್ಟು 18 ಗ್ರಾಂ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದ್ದು ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *