ಪೊಲೀಸ್ ಕ್ವಾರ್ಟರ್ಸ್‌ನ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದ ಮಗು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಪೊಲೀಸ್ ಕ್ವಾರ್ಟರ್ಸ್‌ನ ಮನೆಯೊಳಗೆ ಮಗು ಲಾಕ್‌: ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ..ಕಾರ್ಕಳ: ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಆಕಸ್ಮಿಕವಾಗಿ ಬಾಗಿಲು ಒಳಗಿನಿಂದ ಲಾಕ್ ಆಗಿ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದ ಎರಡು ವರ್ಷದ ಮಗುವನ್ನು ಕಾರ್ಕಳ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಪೊಲೀಸ್ ಕ್ವಾರ್ಟರ್ಸ್‌ ಸಿ-ಬ್ಲಾಕ್‌ನ ಎರಡನೇ ಮಹಡಿಯಲ್ಲಿ ಹರ್ಷವರ್ಧನ್ ಎಂಬ ಎರಡು ವರ್ಷದ ಮಗು ಆಟವಾಡುತ್ತಿತ್ತು.ಈ ವೇಳೆ ಆಕಸ್ಮಿಕವಾಗಿ ಕೊಠಡಿಯೊಳಗೆ ಹೋಗಿ ಬಾಗಿಲು ಒಳಭಾಗದಿಂದ ಲಾಕ್ ಆಗಿ, ಮಗು ಒಳಗಿನಿಂದ ಹೊರಬರಲು ಸಾಧ್ಯವಾಗದಾಗಿದ್ದು, ಬಳಿಕ ಪೋಷಕರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದರು.

ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಟೇರಿಸ್‌ ಮೇಲಿಂದ, ಹಗ್ಗದ ಸಹಾಯ ಪಡೆದು, ಬಾಲ್ಕನಿ ಮೂಲಕ ಇಳಿದು ಬಾಗಿಲು ತೆರೆದು, ಕೇವಲ 15 ನಿಮಿಷಗಳಲ್ಲಿ ಮಗುವನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದರು.ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಅಚ್ಯುತ್ ಕರ್ಕೇರ, ಹರಿಪ್ರಸಾದ್, ಜಯಮೂಲ್ಯ, ದಿನೇಶ್ ಮತ್ತು ಬಸವರಾಜ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.