ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ

ಮಂಗಳೂರು : ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ..ಮಂಗಳೂರು : ಉಳ್ಳಾಲ ಸೀಗ್ರೌಂಡ್‌ನಲ್ಲಿ ಮೀನುಗಾರಿಕೆ ತೆರಳಿದ್ದ ಬೋಟ್‌ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಇಂದು (ಸೆ.15) ರ ಮುಂಜಾನೆ ನಡೆದಿದೆ.

ಹಡಗಿನಲ್ಲಿದ್ದ 13 ಮಂದಿ ಮೀನುಗಾರರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.ಬುರಾಕ್ ಟ್ರಾಲರ್ ಎಂಬ ದೋಣಿ ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಅವರಿಗೆ ಸೇರಿದ್ದು, ಭಾನುವಾರ ರಾತ್ರಿ ಈ ಹಡಗು ಮಂಗಳೂರು ಬಂದರಿನಿಂದ ಕೇರಳದ ಕಡೆಗೆ ಆಳ ಸಮುದ್ರ ಮೀನುಗಾರಿಕೆಗಾಗಿ ಹೊರಟಿತ್ತು. ಅದೃಷ್ಟವಶಾತ್, ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿ, ದೋಣಿ ಕರಾವಳಿಯ ಕಡೆಗೆ ಸಾಗಿ ಸೋಮವಾರ ಮುಂಜಾನೆ ಸೀಗ್ರೌಂಡ್ ಬಳಿ ಎಂಜಿನ್‌ ಹಠಾತ್ತಾಗಿ ಬಂದ್‌ ಆಗಿ ಕಡಲ ತೀರಕ್ಕೆ ಡಿಕ್ಕಿ ಹೊಡೆದಿದೆ.

ಈ ಘಟನೆಯಿಂದ ದೋಣಿ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಈ ಕುರಿತು ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.