ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಆರಂಭ

ಮಂಗಳೂರು: ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ.

ವಿದ್ಯುತ್‌ಚಾಲಿತ ಪ್ರಯಾಣಿಕ ರೈಲು ಸಂಚಾರ ಆರಂಭದೊಂದಿಗೆ ಭವಿಷ್ಯದಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಾಟಕ್ಕೆ ಸಹಕಾರಿಯಾಗುವುದನ್ನು ನಿರೀಕ್ಷಿಸಲಾಗಿದೆ.

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು (ನಂ. 56625/26, 56627/28 ಮತ್ತು 56629/30) ಆರಂಭಗೊಳ್ಳುವುದರೊಂದಿಗೆ ಈ ಭಾಗದ ಪ್ರಯಾಣಿಕರ ಬಹುಕಾಲದ ಕನಸು ನನಸಾಗಿದೆ.

ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡು ಇದೀಗ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ನಡುವೆ ವಿದ್ಯುತ್‌ ಚಾಲಿತ ರೈಲುಗಳ ಓಡಾಟ ಆರಂಭಗೊಂಡಿದೆ.

News Editor

Learn More →

Leave a Reply

Your email address will not be published. Required fields are marked *