ಬಿಗ್‌ಬಾಸ್ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲು

ಬೆಂಗಳೂರು: ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಗ್‌ ಬಾಸ್ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲಾಗಿದೆ.

ಅಮೃತಹಳ್ಳಿಯ ಫ್ಲ್ಯಾಟ್ ನಲ್ಲಿ ಜಗದೀಶ್ ಕುಟುಂಬ ವಾಸವಾಗಿದ್ದು, ಇದೇ ಫ್ಲ್ಯಾಟ್ ನಲ್ಲಿ ಅಕ್ಕ ಬಾವನ ಜೊತೆ ರಂಜಿತ್ ಕೂಡ ವಾಸವಿದ್ದರು. ಈ ಮನೆ ನನ್ನದು ಎಂದು ಅಕ್ಕ – ತಮ್ಮನ ನಡುವೆ ಗಲಾಟೆ ನಡೆದಿದ್ದು, ರಂಜಿತ್ ಪತ್ನಿ ಜೊತೆ ರಂಜಿತ್ ಅಕ್ಕ ಗಲಾಟೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ರಂಜಿತ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಜಗದೀಶ್ ದೂರು ನೀಡಿದ್ದಾರೆ.

ಈ ಹಿನ್ನಲೆ ರಂಜಿತ್ ಅವರನ್ನು ಠಾಣೆಗೆ ಕರೆಸಿದ ಪೊಲೀಸರು ಕೋರ್ಟ್‌ ನಲ್ಲಿ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.