ಸೆ.22ರಂದು ಪುತ್ತೂರಿನ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಇಂಡಿಯಾದಿಂದ ಇಂಜಿನಿಯರ್ಸ್ ಡೇ -ನೂತನ ಪದಾಧಿಕಾರಿಗಳ ಪದಪ್ರದಾನ

ಪುತ್ತೂರು: ವೃತ್ತಿಪರ ಇಂಜಿನಿಯರ್‌ಗಳಿಗೆ ಸಹಕಾರ
ನೀಡುವುದು, ಕಾಮಗಾರಿಯಲ್ಲಿ ಗುಣಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಹುಟ್ಟಿಕೊಂಡ ರಾಷ್ಟ್ರೀಯ ಸಂಸ್ಥೆಯಾಗಿರುವ ಎಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ವತಿಯಿಂದ ಇಂಜಿನಿಯರ್ಸ್ ಡೇ ಮತ್ತು ಸಂಸ್ಥೆಯ ಮುಂದಿನ 2 ವರ್ಷದ ಅವಧಿಗೆ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ ಸೆ.22ರಂದು ಸಂಜೆ ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ. ನಿಯೋಜಿತ ಅಧ್ಯಕ್ಷ ಶಿವರಾಮ್ ಎಂ.ಎಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಎಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್‌ನ ರಾಷ್ಟ್ರಮಟ್ಟದ ಸೆಕ್ರೆಟರಿ ಜನರಲ್ ಆಗಿರುವ ರಾಜೇಂದ್ರ ಕಲ್ಬಾವಿ ಅವರು ಅಧ್ಯಕ್ಷತೆ ವಹಿಸಿ ನೂತನ ಪದಾಧಿಕಾರಿ ಪದಪ್ರದಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಂಗಳೂರಿನ ಸಿಎಮ್‌ಐ ಇದರ ಸ್ಥಾಪಕರು ಮತ್ತು ಸಿಇಒ ಆಗಿರುವ ಅಶೋಕ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಸುಳ್ಯದ ಗಿರೀಶ್ ಬಾರದ್ವಾಜ್ ಅವರು ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಇಬ್ಬರು ಸಿವಿಲ್ ಇಂಜಿನಿಯರ್ಸ್ ಅವರನ್ನು ಸನ್ಮಾನಿಸಲಾಗುವುದು. ನೆಲ್ಯಾಡಿಯ ಶಿವಣ್ಣ ಹೆಗ್ಡೆ ಮತ್ತು ಪುತ್ತೂರು ಕನ್‌ಸ್ಟ್ರಕ್ಷನ್ನ ವಸಂತ ಭಟ್ ಅವರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭ ನಮ್ಮ ಸದಸ್ಯರಲ್ಲೊಬ್ಬರಾದ ಅಜಿತ್ ಹೆಬ್ಬಾರ್‌ರು ತಾಂತ್ರಿಕ ವಿಚಾರಕ್ಕೆ ಸಂಬಂಧಿಸಿ ಲೇಖನ ಬಿಡುಗಡೆಗೊಳ್ಳಲಿದೆ.

ವಿವೇಕಾನಂದ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಶಿವರಾಮ ಎಂ.ಎಸ್ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಕೋಶಾಧಿಕಾರಿ ಚೇತನ್, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ನಿಯೋಜಿತ ಕಾರ್ಯದರ್ಶಿ ವೆಂಕಟ್‌ರಾಜ್ ಪಿ.ಜಿ, ಕಾರ್ಯಕಾರಿ ಸಮಿತಿಯ ನಿಯೋಜಿತ ಸದಸ್ಯ ಶಿವಪ್ರಸಾದ್ ಟಿ, ಸದಸ್ಯರಾದ ಶ್ರೀಕರ ಕಲ್ಲೂರಾಯ, ಕಾವ್ಯಶ್ರೀ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.