1 ಲಕ್ಷ ರೂಪಾಯಿ ಕದ್ದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪಟ್ಟಣ ಪೊಲೀಸರು

ಬಂಟ್ವಾಳ: ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ ಒಂದು ಲಕ್ಷ ರೂಪಾಯಿ ನಗದು ಕದ್ದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಜೀರ್ ಪುನ್ನಯ್ಯರ್ ಎಂದು ಗುರುತಿಸಲಾಗಿದೆ.

ಈತ ಕುಂದಾಪುರದ ರಂಗನಾಥ ಬೆಳ್ಳಾಲ ಆಗಸ್ಟ್ 14 ರಂದು ಬಿ.ಸಿ. ರಸ್ತೆ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಅವರ ಬ್ಯಾಗ್‌ ನಿಂದ ಒಂದು ಲಕ್ಷ ರೂ. ನಗದು ಕಳವು ಗೈದಿದ್ದ. ಈ ಬಗ್ಗೆ ರಂಗನಾಥ ಅವರು ಅವರು ತಕ್ಷಣ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ತ್ವರಿತವಾಗಿ ಕಾರ್ಯಪ್ರವೃತ್ತರಾದ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಪತ್ತೆಹಚ್ಚಿ ಮಂಗಳೂರಿನಲ್ಲಿ ಬಂಧಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *