ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ದೇವಸ್ಥಾನಗಳ ಹಣ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಟೀಲ್ ಕ್ಷೇತ್ರದಲ್ಲಿ ಸೇವಾ ಶುಲ್ಕ ಏರಿಕೆ ಮಾಡಿರುವ ವಿಚಾರದಲ್ಲಿ ಸರಕಾರದ ಪಾತ್ರ ಇಲ್ಲ. ಅವರು ಸೇವಾ ಶುಲ್ಕ ಏರಿಕೆಗೆ ಸ್ವತಂತ್ರರು. ಇಂತಹ 398 ಸ್ವಾಯತ್ತ ಸಂಸ್ಥೆಗಳು ರಾಜ್ಯದಲ್ಲಿ ಇದೆ. ಕಟೀಲ್ ದೇವಸ್ಥಾನದಲ್ಲಿ ಸೇವಾ ಶುಲ್ಕ ಏರಿಕೆಯ ಬಗ್ಗೆ ಬಿಜೆಪಿ ಸರಕಾರ ವಿರುದ್ಧ ಅಪ್ರಚಾರ ಮಾಡುತ್ತಿದೆ. ಸೇವಾ ಶುಲ್ಕ ವಿಚಾರದಲ್ಲಿ ಸರಕಾರದ ಪಾತ್ರ ಇಲ್ಲ ಎಂದು ಕಟೀಲ್ ದೇವಸ್ಥಾನದ ಆಡಳಿತ ಸಮಿತಿ ಸ್ಪಷ್ಟನೆ ನೀಡಿದೆ ಎಂದರು.

ಹಸ್ತಕ್ಷೇಪ ಮಾಡುವಂತಿಲ್ಲ : ಕಟೀಲು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದರೂ, ಅಲ್ಲಿಗೆ ಸರಕಾರ ಕಾರ್ಯ ನಿರ್ವಹಣಾಧಿಕಾರಿಯ ನೇಮಕ ಕೂಡಾ ಮಾಡುವಂತಿಲ್ಲ. ಆಡಳಿತ ಸಂಪೂರ್ಣ ದೇವಸ್ಥಾನದ ಮಂಡಳಿಗೆ ಸೇರಿರು ತ್ತದೆ. ಸರಕಾರ ಯಾವುದೇ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯದ ಆದೇಶವೇ ಇದೆ ಎಂದು ಸಚಿವರು ಸ್ಪಷ್ಟಪಡಿಸಿದರು.

2003ರಲ್ಲಿ ಧಾರ್ಮಿಕ ಪರಿಷತ್ ಕಾನೂನು ಜಾರಿಗೆ ಬಂದ ಬಳಿಕ ಒಂದು ದೇವಸ್ಥಾನದ ಹಣ ಇನ್ನೊಂದು ದೇವಸ್ಥಾನದ ಅಭಿವೃದ್ಧಿಗೆ ಬಳಸುವಂತಿಲ್ಲ. ಸರಕಾರದ ಖಜಾನೆಗೂ ಹಣ ಬರುವುದಿಲ್ಲ ಎಂದು ಹೇಳಿದರು.

2019ರಿಂದ 2023ರ ವರೆಗಿನ ಬಿಜೆಪಿ ಸರಕಾರದ ಅವಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಿದೆ. ನಮ್ಮ ಸರಕಾರ ಬಂದ ಮೇಲೆ ಕುಕ್ಕೆ ಸುಬ್ರಮಣ್ಯ ಸೇರಿದಂತೆ 14 ದೇವಸ್ಥಾನಗಳ ಆಡಳಿತ ಮಂಡಳಿಯು ಕಾರಣ ಗಳನ್ನು ನೀಡಿ, ದರ ಪರಿಷ್ಕರಣೆ ಮಾಡಿಕೊಡಿ ಎಂದು ಮನವಿ ಮಾಡಿದ್ದು, ಇಲಾಖೆ ಆಯುಕ್ತರು ಒಪ್ಪಿಗೆ ಸೂಚಿಸಿದೆ ಎಂದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!