ಪುತ್ತೂರಿನಲ್ಲಿ ಸೆ.29:ಎ.ವಿ.ಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲೋಕಾರ್ಪಣೆ

ಪುತ್ತೂರು: ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ. ಕನ್ಸಕ್ಷನ್ಸ್,ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್‌ಗಳನ್ನು ಪುತ್ತೂರಿನಲ್ಲಿ ಸ್ಥಾಪಿಸಿ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೊಂದು ಕೊಡುಗೆಯಾಗಿ ಇದೀಗ ದ.ಕ. ಜಿಲ್ಲಾ ಮಟ್ಟದ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ದ.ಕ. ಎಂಬ ಸಂಸ್ಥೆಯು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಸೆ.29 ರಂದು ಲೋಕಾರ್ಪಣೆಗೊಳ್ಳುತ್ತಿದೆ.

ಪತ್ರಿಕಾಗೋಷ್ಟಿಯಲ್ಲಿ ಸೊಸೈಟಿಯ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಕಳುವಾಜೆ ಮಾತನಾಡಿ, ತನ್ನ ನೂತನ ಸಹಕಾರಿ ಸಂಸ್ಥೆಯನ್ನು ‘ಸುಭದ್ರ ಭಾರತಕ್ಕಾಗಿ ಸಮರ್ಥ ಸಹಕಾರಿ ಸಂಸ್ಥೆ’ ಎಂಬ ನಂಬಿಕೆಯೊಂದಿಗೆ ಲೋಕಾರ್ಪಣೆ ಮಾಡುತ್ತಿದೆ. ಅಂದು ಬೆಳಗ್ಗೆಯ ಸೊಸೈಟಿಯ ಕಚೇರಿ ಕಟ್ಟಡದಲ್ಲಿ ಪೂರ್ವಾಹ್ನ ಗಂಟೆ 6.00ಕ್ಕೆ ಗಣಹೋಮದ ಮೂಲಕ ದೇವತಾ ಪ್ರಾರ್ಥನೆಯೊಂದಿಗೆ ಲೋಕಾರ್ಪಣ ಕಾರ್ಯವು ಚಾಲನೆ ಪಡೆಯಲಿದೆ. ಬಳಿಕ ಪೂರ್ವಾಹ್ನ ಗಂಟೆ 9.30ಕ್ಕೆ ಕಚೇರಿಯ ಉದ್ಘಾಟನೆ ಕಾರ್ಯಗಳು ನಡೆಯಲಿದ್ದು, ಬೆಂಗಳೂರಿನ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜೆ. ಗಂಗಾಧರ ಅವರು ಕಚೇರಿಯ ಉದ್ಘಾಟನೆ, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೋಶದ ಉದ್ಘಾಟನೆ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಶಶಿಕುಮಾ‌ರ್ ರೈ ಬಾಲೊಟ್ಟು ಅವರು ಗಣಕಯಂತ್ರದ ಉದ್ಘಾಟನೆ ಮತ್ತು ಮಂಗಳೂರಿನ ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷ ಭಾಸ್ಕರ ದೇವಸ್ಯ ಅವರು ಅಧ್ಯಕ್ಷರ ಕೊಠಡಿಯ ಉದ್ಘಾಟನೆಗಳನ್ನು ನೆರವೇರಿಸಲಿದ್ದಾರೆ.

ಬಳಿಕ ಪೂರ್ವಾಹ್ನ ಗಂಟೆ 9.30ರಿಂದ ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಸೊಸೈಟಿಯ ಸಭಾ ಕಾರ್ಯಕ್ರಮದಲ್ಲಿ ಪುತ್ತೂರಿನ ಶಾಸಕ ಅಶೋಕ್‌ ಕುಮಾ‌ರ್ ರೈಯವರು ದೀಪ ಪ್ರಜ್ವಲಿಸಲಿದ್ದಾರೆ. ಪುತ್ತೂರು ನಗರಸಭೆಯ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರು ಪ್ರಥಮ ಸಾಲ ಪತ್ರ ವಿತರಣೆ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್. ಅವರು ಪ್ರಥಮ ಠೇವಣಿ ಪತ್ರ ವಿತರಣೆ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ಟರು ಸಂಸ್ಥೆಯ ಚಿಹ್ನೆಯ ಅನಾವರಣ ಕಾರ್ಯಗಳನ್ನು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಯಾಗಳಾಗಿ ರಾಜ್ಯ ಸೌಹಾರ್ದ ಸಹಕಾರ ಇದರ ನಿರ್ದೇಶಕಿ ಭಾರತಿ ಜಿ. ಭಟ್, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮತ್ತು ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್‌ ಕುಮಾರ್ ಕೆಡೆಂಜಿಯವರು ಭಾಗವಹಿಸಲಿದ್ದಾರೆ.

ಲೋಕಾರ್ಪಣ ಬಾಬು ವಿಶೇಷ ಬಡ್ಡಿ ಯೋಜನೆಯಾಗಿ 2025ರ ವರ್ಷಾಂತ್ಯದೊಳಗೆ ಇರಿಸಲಾಗುವ ಎಲ್ಲಾ ಠೇವಣಿಗಳಿಗೆ ಶೇ.0.25 ಅಧಿಕ ಬಡ್ಡಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಸೊಸೈಟಿಯ ಉಪಾಧ್ಯಕ್ಷ ಉಮೇಶ ಮಳುವೇಲು, ನಿರ್ದೇಶಕಾರದ ಎ ವಿ ನಾರಾಯಣ, ಸೀತಾರಾಮ ಕೇವಳ, ಗುಡ್ಡಪ್ಪ ಗೌಡ ಬಲ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ ಕಾಂತಿಲ, ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ನಿರ್ದೇಶಕಿ ಪ್ರತಿಭಾದೇವಿ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!