
ಸ್ಕೂಟಿಯಲ್ಲಿ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆ ಗುಂಡಿಯಿಂದಾಗಿ ಸ್ಕೂಟಿ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ವಿದ್ಯಾರ್ಥಿನಿ ಮೇಲೆ ಹರಿದು ಹೋಗಿದ್ದು, ವಿದ್ಯಾರ್ಥಿನಿ ನಡುರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದಾರೆ.
