ಅ.11ರಂದು ವಿವೇಕ ವಿಜಯ ವಿಶೇಷ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಅಮೇರಿಕಾದ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ಎತ್ತಿಹಿಡಿದ ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದ ಅವರ ಉಪನ್ಯಾಸ 132ನೇ ವರ್ಷದ ಆಚರಣೆಯ ಹಿನ್ನಲೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ಅ.11ರಂದು ವಿವೇಕ ವಿಜಯ ವಿಶೇಷ ಉಪನ್ಯಾಸಗಳ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಸಮಿತಿ ಅಧ್ಯಕ್ಷ ರವೀಂದ್ರ ಪಿ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಈ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಉದ್ಘಾಟಿಸಲಿದ್ದಾರೆ. ವಿದ್ಯಾರ್ಥಿಗಳಿಗಾಗಿ ಹಾಗೂ ಶಿಕ್ಷಕರಿಗಾಗಿ ಪೂರ್ವಾಹ್ನ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ 4.30ಕ್ಕೆ ಸಾರ್ವಜನಿಕರಿಗಾಗಿ ಸಿಂಧೂರ-ಭಾರತದ ವಿಶ್ವರೂಪ ಎಂಬ ವಿಚಾರದ ಬಗ್ಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಮಾತನಾಡಲಿದ್ದಾರೆ. ಪುತ್ತೂರಿನ ಅರ್ಥೋಪೆಡಿಕ್ ಸರ್ಜನ್ ಡಾ.ಸಚಿನ್ ಶಂಕರ್ ಹಾರಕೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮೊದಲ ಅವಧಿ ಬೆಳಿಗ್ಗೆ 9.45ಕ್ಕೆ ಆರಂಭವಾಗಲಿದ್ದು, ಕೇಸವ ಸಂಕಲ್ಪ ಸಭಾಭವನದಲ್ಲಿ ವಿದ್ಯಾರ್ಥಿಗಳಿಗಾಗಿ ಭಾರತ ವಂದನಾ ವಿವೇಕ ಚಿಂತನಾ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಚಂಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಪದವಿ ಪೂರ್ವ ಕಾಲೇಜಿನ ಆಡಳಿತ ಸಮಿತಿ ಅಧ್ಯಕ್ಷ ರವೀಂದ್ರ ಪಿ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳಿಗ್ಗೆ 11.30ಕ್ಕೆ ವೈದೇಹಿ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ರಾಷ್ಟ್ರ ರಕ್ಷಣಾ ವಿವೇಕ ಶಿಕ್ಷಣ ಕಾರ್ಯಕ್ರಮ ನಡೆಯಲಿದೆ. ದಿಕ್ಸೂಚಿ ಭಾಷಣವನ್ನು ಚಕ್ರವರ್ತಿ ಸೂಲಿಬೆಲೆ ಮಾಡಲಿದ್ದಾರೆ. ನಿವೃತ್ತ ಪ್ರಾಂಶುಪಾಲ ಡಾ.ವರದರಾಜ ಚಂದ್ರಗಿರಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಆಡಳಿತ ಮಂಡಳಿ ಸಂಚಾಲಕ ಎಂ.ಗೋಪಾಲಕೃಷ್ಣ ಉಪಸ್ಥಿತರಿರುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಆಡಳಿತ ಸಮಿತಿ ಕೋಶಾಧಿಕಾರಿ ಸಚಿನ್ ಶೆಣೈ, ನಿರ್ದೇಶಕರು ಡಾ.ಕೃಷ್ಣಪ್ರಸನ್ನ, ಪ್ರಾಂಶುಪಾಲ್ ದೇವಿಚರಣ್ ರೈ, ಶಿಕ್ಷಣ ಸಂಯೋಜಕ ಶ್ರೀವತ್ಸ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!