ಮಂಗಳೂರಲ್ಲಿ ಖ್ಯಾತ ಟೆರರಿಸ್ಟ್ ಎಂದು ಕ್ಯಾಬ್ ಚಾಲಕನಿಗೆ ಅವಮಾನ ಮಾಡಿದ ಮಲಯಾಳಂ ನಟ ಜಯಕೃಷ್ಣನ್ ಬಂಧನ

ಮಂಗಳೂರು: ಖ್ಯಾತ ಮಲಯಾಳಂ ನಟ ಜಯಕೃಷ್ಣನ್‌ ಅವರನ್ನು ಮಂಗಳೂರಿನ ಉರ್ವಾ ಪೊಲೀಸ್‌ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಟನ ವಿರುದ್ಧ ಟೆರರಿಸ್ಟ್ ಎಂದು ಬೈದು, ಧಾರ್ಮಿಕವಾಗಿ ನಿಂದನೆ ಮಾಡಿದ ಆರೋಪ ಬಂದಿದೆ.

ಇತ್ತೀಚೆಗಷ್ಟೆ, ಸೆಪ್ಟೆಂಬರ್ 9ರಂದು, ಜಯಕೃಷ್ಣನ್, ಸಂತೋಷ್ ಅಬ್ರಾಹಂ ಮತ್ತು ವಿಮಲ್ ಎಂಬವರು ಆಪ್ ಮೂಲಕ ಕ್ಯಾಬ್ ಬುಕ್ ಮಾಡಿದ್ದರು. ಚಾಲಕರಾಗಿ ಬಂದ ಶಫೀಕ್ ಅಹ್ಮದ್‌ ಅವರ ಮೇಲೆ ಮೂವರು ಜಾತಿ ಹಾಗೂ ಧರ್ಮವನ್ನು ಆಧರಿಸಿ ಅವಮಾನಕಾರಿ ಪದಗಳನ್ನು ಬಳಸಿದ್ದು, ಟೆರರಿಸ್ಟ್ ಎಂದು ಕರೆಯಲಾಗಿದೆ.

ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ನಡೆದ ನಿಂದನೆ ಹಾಗೂ ಹಲ್ಲೆಗೆ ಯತ್ನದ ಆರೋಪದ ಮೇರೆಗೆ ಕ್ಯಾಬ್ ಚಾಲಕನು ಉರ್ವಾ ಠಾಣೆಗೆ ದೂರು ನೀಡಿದ ಹಿನ್ನೆಲೆ, ಭಾರತೀಯ ದಂಡ ಸಂಹಿತೆಯ ಕಲಂ 352 ಮತ್ತು 352(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಜಯಕೃಷ್ಣನ್‌ ಅವರನ್ನು ವಶಕ್ಕೆ ಪಡೆದಿದ್ದು, ಇತರ ಇಬ್ಬರ ಶೋಧವೂ ಮುಂದುವರಿದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!