ವಿಟ್ಲ‌ಸಮುದಾಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ,ಸಿಬಂದಿ ಕೊರತೆ ಪರಿಹರಿಸಿ: ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ.

ವಿಟ್ಲ‌ಸಮುದಾಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ,ಸಿಬಂದಿ ಕೊರತೆ ಪರಿಹರಿಸಿ: ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬಂದಿ,ವೈದ್ಯರ ಕೊರತೆ ಇದ್ದು ಅದನ್ನು ತಕ್ಷಣ ಪರಿಹರಿಸುವಂತೆ ಆರೋಗ್ಯ‌ಸಚಿವ ದಿನೇಶ್ ಗುಂಡೂರಾವ್ ಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ವಿಟ್ಲ ಸಮುದಾಯ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಅಲ್ಲಿ ವೈದ್ಯರ ಕೊರತೆಯಿಂದ ಜನರಿಗೆ ಸಂಕಷ್ಟ ಉಂಟಾಗಿದೆ. ವಿಟ್ಲದಲ್ಲಿ ಬೇರೆ ಯಾವುದೇ ಆಸ್ಪತ್ರೆ ಇಲ್ಲದ ಕಾರಣ ತುರ್ತು‌ಸಂಧರ್ಭದಲ್ಲಿ ತೀವ್ರ ತೊಂದರೆಯನ್ನು ಅನುಭವಿಸಬೇಕಾಗಿ ಬಂದಿದೆ,ಜೊತೆಗೆ ಸಿಬಂದಿಗಳ ಕೊರತೆಯೂ ಇದೆ. ತಕ್ಷಣ ಈ ಬಗ್ಗೆ ಮುತುವರ್ಜಿ ವಹಿಸಿ ಪರಿಹರಿಸುವಂತೆ ಮನವಿ ಮಾಡಿದರು.

ಡಯಾಲಿಸಿಸ್ ಕೇಂದ್ರಕ್ಕೆ ಮನವಿ:
ವಿಟ್ಲ‌ಸಮುದಾಯ ಕೇಂದ್ರ ಸುಸಜ್ಜಿತವಾದ ಕಟ್ಟಡವನ್ನು ಹೊಂದಿದ್ದು ಸೌಲಭ್ಯಗಳ ಕೊರತೆ ಮಾತ್ರ ಇದೆ. ಈ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಪ್ರಾರಂಭ ಮಾಡುವಂತೆಯೂ ಸಚಿವರಿಗೆ ಶಾಸಕರು‌ಮನವಿ ಮಾಡಿದರು. ಶಾಸಕರ ಮನವಿಗೆ ಸಚಿವರು ಸ್ಪಂದಿಸಿದ್ದು ಶೀಘ್ರ ಕ್ರಮಕ್ಕೆ ಸೂಚನೆಯನ್ನು ನೀಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!